ದೊಡ್ಡಬಳ್ಳಾಪುರ: ಮಾದಗೊಂಡನಹಳ್ಳಿ ಅಂಗನವಾಡಿ ಕಾರ್ಯಕರ್ತೆ ರತ್ನಮ್ಮ (54) ಕರೊನಾ ಸೋಂಕಿನ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ. ಕರ್ತವ್ಯ ನಿರ್ವಹಣೆ ವೇಳೆ ಕರೊನಾ ಸೋಂಕಿಗೆ ಒಳಗಾಗಿ, ಆಕಾಶ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಕೋವಿಡ್-19 ನಿಯಮಗಳ ಅಡಿಯಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹರಿತಲೇಖನಿಗೆ ತಿಳಿಸಿವೆ.

