ದೊಡ್ಡಬಳ್ಳಾಪುರ: ಕೋವಿಡ್-19/ ಕರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, “ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ”ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
“ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ” ಅವರ ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ: ಜಗದೀಶ್.ಕೆ.ನಾಯಕ್ ಪುಷ್ಪನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ, ಜಿಲ್ಲಾಧಿಕಾರಿಯವರ ಕಚೇರಿ ಸಹಾಯಕರಾದ ರಾಜೀವಲೋಚನ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

