ದೊಡ್ಡಬಳ್ಳಾಪುರ: ರೈತರಿಗೆ ಕೃಷಿ ತಂತ್ರಜ್ಞಾನಗಳ ಅರಿವು ಹಾಗೂ ಮಾರ್ಗದರ್ಶನದ ಅಗತ್ಯವಿದೆ – ಕುಲಪತಿ ಡಾ. ಎಸ್. ರಾಜೇಂದ್ರಪ್ರಸಾದ್

ದೊಡ್ಡಬಳ್ಳಾಪುರ: ನಮ್ಮ ದೇಶವು ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆಯಾಗಿದ್ದು, ಕೃಷಿಯಲ್ಲಿ ನೂತನ ಆವಿಷ್ಕಾರಗಳು ನಿರಂತರವಾಗಿ ನಡೆಯುತ್ತಿದೆ. ಇದರ ಜೊತೆಗೆ ಪೌಷ್ಠಿಕ ಭದ್ರತೆಯನ್ನು ಸಾಧಿಸುವುದು ನಮ್ಮೆಲ್ಲರ ಗುರಿಯಾಗಿದ್ದು, ಇದಕ್ಕೆ ಪೂರಕವಾಗಿ ರೈತರಿಗೆ ಹಾಗೂ ಕೃಷಿ ಪರಿಕರಗಳ ವಿತರಕರಿಗೆ ಕೃಷಿ ತಂತ್ರಜ್ಞಾನಗಳ ಅರಿವು ಹಾಗೂ ಮಾರ್ಗದರ್ಶನದ ಅಗತ್ಯವಿದೆ ಎಂದು ಕೃಷಿ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್. ರಾಜೇಂದ್ರಪ್ರಸಾದ್ ತಿಳಿಸಿದರು.

ತಾಲೂಕಿನ ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಮತ್ತು ಕೃಷಿ ವಿಸ್ತರಣೆ ನಿರ್ವಹಣೆ ರಾಷ್ಟ್ರೀಯ ಸಂಸ್ಥೆ, ಮ್ಯಾನೇಜ್, ಹೈದರಾಬಾದ್ ಸಹಯೋಗದಲ್ಲಿ ಕೃಷಿ ಪರಿಕರಗಳ ವಿತರಕರಿಗೆ ಒಂದು ವರ್ಷದ ಡಿಪ್ಲೊಮಾ ಕೋರ್ಸ್‍ಗೆ ನೋಂದಾಯಿಸಿದ ಅಭ್ಯರ್ಥಿಗಳಿಗೆ ಸಂಪರ್ಕ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ದೇಶ ಆಹಾರ ಉತ್ಪಾದನೆಯಲ್ಲಿ ಪ್ರಗತಿಯನ್ನು ಸಾಧಿಸಿದೆ. ಕೃಷಿಯಲ್ಲಿ ರೈತರಷ್ಟೇ ಮಹತ್ವವು ಕೃಷಿ ಪರಿಕರ ಮಾರಾಟಗಾರರಿಗಿದ್ದು, ರೈತರೊಂದಿಗೆ ನೇರವಾಗಿ ಸಂಪರ್ಕದಲ್ಲಿರುವುದರಿಂದ, ಈ ಡಿಪ್ಲೋಮಾ ತರಗತಿಗಳಲ್ಲಿ ಕೃಷಿ ತಂತ್ರಜ್ಞಾನಗಳ ಬಗ್ಗೆ ಕೊಡುವಂತಹ ಮಾಹಿತಿಗಳನ್ನು ಮನದಟ್ಟುಮಾಡಿಕೊಂಡು ರೈತರಿಗೆ ಸೂಕ್ತ ರೀತಿಯಲ್ಲಿ ಕೃಷಿ ಬಗ್ಗೆ ಮಾರ್ಗದರ್ಶನ ನೀಡಬೇಕು.  ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸುವುದರೊಂದಿಗೆ ರೈತರ ಆದಾಯ ದ್ವಿಗುಣಗೊಳಿಸುವುದು ಕೃಷಿ ಪರಿಕರ ಮಾರಾಟಗಾರರ ಧ್ಯೇಯವಾಗಬೇಕು ಎಂದರು.

ಪ್ರಸ್ತುತ ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರವನ್ನು ಕಾಯ್ದುಕೊಂಡು, ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗದರ್ಶನಗಳನ್ನು ಪಾಲಿಸುತ್ತಿರಬೇಕೆಂದು ಕರೆ ನೀಡಿದರು.

ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾ ನಿರ್ದೇಶಕ ಡಾ. ಬೈರೇಗೌಡ ಮಾತನಾಡಿ ಡಿಪ್ಲೋಮಾ ತರಗತಿಗಳ ಸದುಪಯೋಗ ಪಡೆಯಬೇಕು. ವ್ಯಾವಹಾರಿಕ ದೃಷ್ಟಿಯಿಂದ ಮಾತ್ರವಲ್ಲದೇ ರೈತರಿಗೆ ಕೃಷಿ ತಾಂತ್ರಿಕತೆಗಳ ಮಾಹಿತಿಯನ್ನು ನೀಡಬೇಕೆಂದರು.

ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಎ.ಪಿ. ಮಲ್ಲಿಕಾರ್ಜುನ ಗೌಡ, ಕೃಷಿ ತಂತ್ರಜ್ಞಾನ ಮಾಹಿತಿ ಕೇಂದ್ರದ ಮುಖ್ಯಸ್ಥ ಡಾ. ಮಂಜುನಾಥ್, ಕೃ.ವಿ.ವಿಯ ತಾಂತ್ರಿಕ ಅಧಿಕಾರಿ ಡಾ. ಪಂಕಜ, ಕಾರ್ಯಕ್ರಮದ ಅನುವುಗಾರ ಓಬಳೇಶಪ್ಪ, ಕೃಷಿ ವಿಜ್ಞಾನ ಕೇಂದ್ರದ ಸಿಬ್ಬಂದಿ ಹಾಗೂ ಕೃಷಿ ಪರಿಕರಗಳ ಮಾರಾಟಗಾರರು ಹಾಜರಿದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]