ದೊಡ್ಡಬಳ್ಳಾಪುರ: ನಗರ ಸೇರಿದಂತೆ ತಾಲೂಕಿನಾದ್ಯಂತ ಸಡಗರ, ಸಂಭ್ರಮದಿಂದ ಆಯುಧ ಪೂಜೆ ಹಾಗೂ ಶಕ್ತಿ ದೇವತೆಗಳ ಪೂಜೆ ಸಂಭ್ರಮ ಕಳೆಗಟ್ಟಿದೆ.
ಆಯುಧ ಪೂಜೆ ನವರಾತ್ರಿ ಹಬ್ಬದ ಒಂದು ಭಾಗವಾಗಿದ್ದು, ದಸರಾ ಹಬ್ಬದ ಅಂಗವಾಗಿ ಶಸಾಸ್ತ್ರ ಹಾಗೂ ಸಾಧನಗಳನ್ನು ಪೂಜೆಸಲಾಗುತ್ತದೆ. ಮನೆ ಹಾಗೂ ಕಚೇರಿಯನ್ನು ಹೂಗಳಿಂದ ಅಲಂಕರಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ.
ನಗರದಲ್ಲಿನ ಶಕ್ತಿ ದೇವತೆಗಳನ್ನು ವಿಶೇಷವಾಗಿ ಸಿಂಗರಿಸಿ ಪೂಜೆಸಲಾಗುತ್ತಿದೆ. ಮಗ್ಗಗಳು, ಯಂತ್ರಗಳು, ವಾಹನಗಳು ಮತ್ತಿತರ ಸಾಧನಗಳನ್ನು ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸುತ್ತಿರುವ ದೃಶ್ಯ ಎಲ್ಲೆಡೆ ಸಾಮಾನ್ಯವಾಗಿದೆ. ಪಟ್ಟಣದ ಹಸಿರು ಹೊನಲು ತಂಡ ದಿನನಿತ್ಯ ಬಳಸುವ ಆಯುಧಗಳನ್ನು ಪೂಜೆ ಸಲ್ಲಿಸಿದರು.
ಇನ್ನು ಹಬ್ಬದ ಹಿನ್ನೆಲೆ ಮಾರುಕಟ್ಟೆಯಲ್ಲಿ ಭರ್ಜರಿ ವ್ಯಾಪಾರ ಕಂಡು ಬಂತು, ಹೂವು, ಹಣ್ಣು, ಬಾಳೆ ದಿಂಡು, ಬೂದ ಕುಂಬಳಕಾಯಿ ವ್ಯಾಪಾರಕ್ಕೆ ಸಾರ್ವಜನಿಕರು ಮುಗಿಬಿದ್ದಿದ್ದರು.

