ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 119 ಜನರಿಗೆ ಕರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿಗೆ ಚಿಕಿತ್ಸೆಗೆ ದಾಖಲಾಗಿದ್ದ ಮೂರು ಜನ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದು. ನವರಾತ್ರಿಯ ಆಯುಧ ಪೂಜೆ, ವಿಜಯದಶಮಿ ಸಂಭ್ರಮದಲ್ಲಿರುವ ಜನರಿಗೆ ಕರೊನಾ ಸೋಂಕು ನೆಮ್ಮದಿ ಕೆಡಿಸಿದೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಭಾನುವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 68 ಪುರುಷರು, 51 ಮಹಿಳೆಯರು ಸೇರಿ ಒಟ್ಟು 119 ಜನರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿಗೆ ಒಳಗಾಗಿ ಆಕಾಶ್ ಆಸ್ಪತ್ರೆಗೆ ದಾಖಲಾಗಿದ್ದ ಬ್ರಾಹ್ಮಣರ ಬೀದಿಯ 34 ವರ್ಷ ಪುರುಷ, ಗಾಣಿಗರ ಪೇಟೆಯ 54 ವರ್ಷದ ಪುರುಷ, ಸಂಜಯನಗರದ 63 ವರ್ಷದ ಮಹಿಳೆ ಉಸಿರಾಟದ ತೊಂದರೆಯಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ವರದಿ ಹರಿತಲೇಖನಿಗೆ ತಿಳಿಸಿವೆ.
ಪ್ರಸ್ತುತ ತಾಲೂಕಿನಲ್ಲಿ 4254 ಮಂದಿಗೆ ಕರೊನಾ ಸೋಂಕು ತಗುಲಿದ್ದು 3603 ಮಂದಿ ಗುಣಮುಖರಾಗಿದ್ದಾರೆ.
ಉಳಿದಂತೆ ಸೋಂಕಿಗೆ ಒಳಗಾದ 56 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 592 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

