ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ

ಮೈಸೂರು: ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ವಿಜಯದಶಮಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಗಮಿಸಿದ್ದಾರೆ

ಸಿಎಂ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ರಾಮದಾಸ್, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ವಾಗತಿಸಿದರು.

ಕೋವಿಡ್-19 ಸಾಂಕ್ರಾಮಿಕ ಹರಡುವಿಕೆ ಹೆಚ್ಚಾಗುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಸರ್ಕಾರದ ವತಿಯಿಂದ ಈ ಬಾರಿ ದಸರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆ ನಿಗಧಿತ ಕಲಾತಂಡಗಳನ್ನು ನಿಯೋಜಿಸಲಾಗಿದೆ.

ಅಕ್ಟೋಬರ್ 26 ರಂದು ವಿಜಯದಶಮಿ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸುವ ಕಲಾತಂಡಗಳು ಹಾಗೂ ಸ್ತಬ್ಧಚಿತ್ರಗಳ ಕ್ರಮಾಂಕ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಮಧ್ಯಾಹ್ನ 2.59 ರಿಂದ 3.20 ರವರೆಗೆ ನಂದೀಧ್ವಜ ಪೂಜೆ, ಕೆ.ಎನ್.ಮಹೇಶ್ ಮತ್ತು ತಂಡದಿಂದ ವೀರಗಾಸೆ ಇರಲಿದೆ. ಮೆರವಣಿಗೆಯಲ್ಲಿ ಮಧ್ಯಾಹ್ನ 3.30 ರಿಂದ 3.40 ರವರೆಗೆ ನಿಶಾನೆ ಆನೆಗಳು, ನೌಪತ್ ಆನೆಗಳು, ಕೃಷ್ಣಮೂರ್ತಿ ವಿ ಮತ್ತು ತಂಡ ಹಾಗೂ ಪುಟ್ಟಸ್ವಾಮಿ ಎ ಮತ್ತು ತಂಡದಿಂದ ನಾದಸ್ವರ, ರಾಜಪ್ಪ ಮತ್ತು ತಂಡದಿಂದ ವೀರಗಾಸೆ ಇರಲಿದೆ.

ಬಳಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸುರು ವತಿಯಿಂದ ಸ್ತಬ್ಧಚಿತ್ರ, ಶ್ರೀನಿವಾಸ್ ರಾವ್ ಮತ್ತು ತಂಡದಿಂದ ಚೆಂಡೆ ಮೇಳ, ಸಿದ್ದರಾಜು ಮತ್ತು ತಂಡದಿಂದ ಮರಗಾಲು ವೇಷ, ಟಿ.ಕೆ. ರಾಜೇಶಖರ್ ಮತ್ತು ತಂಡದಿಂದ ಚಿಲಿಪಿಲಿ ಗೊಂಬೆ ಇರಲಿದೆ.

ಮಧ್ಯಾಹ್ನ 3.50 ರಿಂದ 4.15 ಗಂಟೆಯವರೆಗೆ ಕರ್ನಾಟಕ ಪೊಲೀಸ್ ಬ್ಯಾಂಡ್ ವತಿಯಿಂದ ಆನೆ ಬಂಡಿ ಸ್ತಬ್ಧಚಿತ್ರ, ಬಳಿಕ ಪೊಲೀಸ್ ಅಶ್ವದಳ ಪ್ರಧಾನ ದಳಪತಿ, ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ, ಮೈಸೂರು,  ನಟರಾಜು ವಿ ಮತ್ತು ತಂಡದಿಂದ ಪಟ್ಟದ ನಾದಸ್ವರ ಇರಲಿದೆ.

ಮಧ್ಯಾಹ್ನ 3.40 ರಿಂದ 4.15 ಗಂಟೆಯವರೆಗೆ ಚಿನ್ನದ ಅಂಬಾರಿಯಲ್ಲಿರುವ ನಾಡದೇವಿ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಕೆ, ಬಳಿಕ ಪೊಲೀಸ್ ಅಶ್ವದಳ-ಕೆ.ಎ.ಆರ್.ಪಿ ಮೌಂಟೆಡ್ ಕಂಪನಿ, ಮೈಸೂರು. ಬಳಿಕ ಫಿರಂಗಿ ಗಾಡಿಗಳು, ಅರಣ್ಯ ಇಲಾಖೆ ವೈದ್ಯರ ತಂಡ, ಅಗ್ನಿಶಾಮಕ ತಂಡ ಹಾಗೂ ತುರ್ತುಚಿಕಿತ್ಸಾ ವಾಹನ ಇರಲಿದೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]