ಹಾಲು ಕರೆಯುವ ಪುಟ್ಟ ಯಂತ್ರಗಳ ಆವಿಷ್ಕಾರವಾಗಬೇಕು: ಪ್ರಗತಿಪರ ರೈತ ಎನ್‌.ಪಿ.ಬಸವರಾಜ್‌

ದೊಡ್ಡಬಳ್ಳಾಪುರ: ಒಂದೆರಡು ಹಸುಗಳನ್ನು ಸಾಕಾಣಿಕೆ ಮಾಡುವ ರೈತರಿಗೆ ಅನುಕೂಲವಾಗುವಂತೆ ಹಾಲು ಕರೆಯುವ ಪುಟ್ಟ ಯಂತ್ರಗಳನ್ನು ವಿನ್ಯಾಸಗೊಳಸಬೇಕು ಎಂದು ಪ್ರಗತಿಪರ ರೈತ ಎನ್‌.ಪಿ.ಬಸವರಾಜ್‌ ಒತ್ತಾಯಿಸಿದರು.

ಅವರು ತಾಲ್ಲೂಕಿನ ನಾಗಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಮಾತನಾಡಿದರು.

ನಮ್ಮಲ್ಲಿನ ಬಹುತೇಕ ಜನ ರೈತರು ಕೃಷಿಯೊಂದಿಗೆ ಒಂದೆರಡು ಹಸುಗಳನ್ನು ಸಾಕಾಣಿಕೆ ಮಾಡುವ ಮೂಲಕ ಹೈನುಗಾರಿಕೆ ಮಾಡುವ ರೈತರ ಸಂಖ್ಯೆಯೇ ಹೆಚ್ಚಿನ ಪ್ರಮಾಣದಲ್ಲಿದೆ. ಆದರೆ ಬಮೂಲ್‌ ವತಿಯಿಂದ ದೊಡ್ಡ ಹಾಲು ಕರೆಯುವ ಯಂತ್ರವನ್ನು ₹28 ಸಾವಿರ ನೀಡಿ ಕೊಳ್ಳಬೇಕಿದೆ. ಒಕ್ಕೂಟ ಶೇ50ರಷ್ಟು ಸಬ್ಸಿಡಿ ನೀಡುತ್ತದೆಯಾದರು ಇಷ್ಟೊಂದು ದೊಡ್ಡಮೊತ್ತವನ್ನು ರೈತರು ಭರಿಸುವಷ್ಟು ಆರ್ಥಿಕವಾಗಿ ಸದೃಢರಾಗಿಲ್ಲ. ಸಬ್ಸಿಡಿ ಪ್ರಮಾಣವನ್ನು ಹೆಚ್ಚಿಸಬೇಕು ಅಥವಾ ಹಾಲು ಕರೆಯುವ ಪುಟ್ಟ ಯಂತ್ರಗಳ ಆವಿಷ್ಕಾರವಾಗಬೇಕು. ಇಡೀ ರಾಜ್ಯದಲ್ಲಿಯೇ ಬೆಂಗಳೂರು ಹಾಲು ಒಕ್ಕೂಟ ಹಾಲಿನ ಉತ್ಪಾದನೆ ಹಾಗೂ ಮಾರಾಟ ಎರಡರಲ್ಲೂ ಮುಂಚೂಣಿಯಲ್ಲಿದೆ. ಹೀಗಾಗಿ ಹಾಲು ಉತ್ಪಾದಕರಿಗು ಹೆಚ್ಚಿನ ಸಹಾಯಗಳನ್ನು ಮಾಡಬೇಕಿದೆ ಎಂದರು.

ಸಭೆಯಲ್ಲಿ ಮಾತನಾಡಿದ ಬಮೂಲ್‌ನ ದೊಡ್ಡಬಳ್ಳಾಪುರ ಹಾಲು ಶಿಬಿರದ ಉಪ ವ್ಯವಪಸ್ಥಾಪಕ ಕೆ.ಜಿ.ಗೋಪಾಲಕೃಷ್ಣ, ರಾಜ್ಯದ ಇತರೆ ಹಾಲು ಒಕ್ಕೂಟಗಳಿಗಿಂತಲು ಹೆಚ್ಚನ ಸೌಲಭ್ಯ ಹಾಗೂ ಬೆಲೆಯನ್ನು ಹಾಲು ಉತ್ಪಾದಕರಿಗೆ ನೀಡುತ್ತಿದೆ. ಲಾಕ್‌ಡೌನ್‌ ಆರಂಭದಿಂದ ತೆರವಾದ ನಂತರವು ಹಾಲು ಮಾರುಕಟ್ಟೆ ಸುಧಾರಣೆಯಾಗಿಲ್ಲ.ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಿದ್ದ ಹಾಲು ಸಹ ನಿಲುಗಡೆಯಾಗಿದೆ.ಹಾಲಿನಿಂದ ಉಪ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡುವ ಕಡೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ನಾಗಸಂದ್ರ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎನ್‌.ಮಹೇಶ್‌ ವಹಿಸಿದ್ದರು. ಇದೇ ಸಂದರ್ಭದಲ್ಲಿ ಸಂಘಕ್ಕೆ ಹೆಚ್ಚು ಹಾಲು ಸರಬರಾಜು ಮಾಡಿದ ಅನುಸೂಯ, ನಟರಾಜು, ಹರೀಶ್‌ಕುಮಾರ್ ಅವರಿಗೆ ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಯಿತು.

ಸಭೆಯಲ್ಲಿ ವಿಸ್ತರಣಾಧಿಕಾರಿ ಜಿ.ಮುನಿರಾಜು, ಸಂಘದ ನಿರ್ದೇಶಕರಾದ ನಾಗಮಣಿ, ಅನುಸೂಯ, ಎನ್‌.ವಿ.ನಾಗರಾಜು, ಮಲ್ಲರಾಜು, ಎನ್‌.ಬಿ.ರಾಜಣ್ಣ, ವಿರೂಪಾಕ್ಷಯ್ಯ, ವಿನುತ, ಚಿಕ್ಕಸಿದ್ದಪ್ಪ, ಅನಂತಪದ್ಮನಾಭಚಾರ್ಯ, ಕಿರಣ್‌, ಶಿವಮ್ಮ, ಮುಖ್ಯಕಾರ್ಯನಿರ್ವಾಹಕ ಎಂ.ದೇವರಾಜ್‌ ಇದ್ದರು.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]