ನನಸಾಗದ ದೊಡ್ಡಬಳ್ಳಾಪುರ ಜಿಲ್ಲಾಸ್ಪತ್ರೆ‌ ಕನಸು / ಶಾಸಕ ಟಿ.ವೆಂಕಟರಮಣಯ್ಯರ ಕಳಕಳಿಯ ಮನವಿಗೂ ಸ್ಪಂದಿಸದ ರಾಜ್ಯ ಸರ್ಕಾರ

ದೊಡ್ಡಬಳ್ಳಾಪುರ: ಬಹು ವರ್ಷಗಳ ಬೇಡಿಕೆಯಾಗಿದ್ದ ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಆಡಳಿತಾತ್ಮಕ ಅನುಮೋದನೆ ಕನಸನ್ನು ರಾಜ್ಯ ಬಿಜೆಪಿ ಸರ್ಕಾರ ಕಡೆಗಣಿಸಿದೆ.

ದೊಡ್ಡಬಳ್ಳಾಪುರ ತಾಲೂಕಿನ 250 ಹಾಸಿಗಗಳ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆಯನ್ನಾಗಿ ಒಟ್ಟು ರೂ.89.10 ಕೋಟಿಗಳ ಅಂದಾಜು ಮೊತ್ತದಲ್ಲಿ ಆಡಳಿತಾತ್ಮಕ ಅನುಮೋದನೆ ನೀಡದೆ ಸಚಿವ ಸಂಪುಟ ನಿರ್ಣಯವನ್ನು ಮುಂದೂಡಲಾಗಿದೆ.

ಈ ಕುರಿತಂತೆ ಶಾಸಕ ಟಿ.ವೆಂಕಟರಮಣಯ್ಯ ಸದನದಲ್ಲಿ ಪದೇ ಪದೇ ಸದನದಲ್ಲಿ ಮನವಿ ಮಾಡಿದರು ಸಹ, ರಾಜ್ಯ ಬಿಜೆಪಿ ಸರ್ಕಾರ ಸ್ಪಂದಿಸದೆ ಇರುವುದು ತಾಲೂಕಿನ ಜನರ ಬೇಸರಕ್ಕೆ ಕಾರಣವಾಗಿದೆ.

ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ನಿರ್ಮಾಣವಾದ ತಾಯಿಮಗು ಆಸ್ಪತ್ರೆ ಕರೊನಾ ಸಂಧರ್ಭದಲ್ಲಿ ತಾಲೂಕಿನ ಜನತೆಗೆ ಸಂಜೀವಿನಿಯಾಗಿ ಚಿಕಿತ್ಸೆ ನೀಡುತ್ತಿದೆ. ಇನ್ನು ಇದೇ ಅವಧಿಯಲ್ಲಿ ಆರಂಭವಾದ ವಸತಿ ಶಾಲೆಗಳು ಸಹ ಕರೊನಾ ಸೋಂಕಿತರ ಚಿಕಿತ್ಸೆಗೆ ಬಹಳಷ್ಟು ಅನುಕೂಲವನ್ನು ಉಂಟು ಮಾಡಿದೆ.

ಕರೊನಾ ಸೋಂಕಿನಂತಹ ಕಷ್ಟದ ಸಂಧರ್ಭದಲ್ಲಿ ತಾಲೂಕಿನ ಆಸ್ಪತ್ರೆಯನ್ನು ಜಿಲ್ಲಾ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಿದ್ದರೆ ಜನತೆ ಮತ್ತಷ್ಟು ಸೌಲಭ್ಯ ದೊರಕುತ್ತಿತ್ತು. ಕರೊನಾ ಸೋಂಕಿಗೆ  ಒಳಗಾದವರಿಗೆ ಇರುವ ಎರಡು ಆಕ್ಸಿಜನ್ ಸೌಲಭ್ಯದ ಕಾರಣ ಇತರ ತಾಲೂಕಿಗೆ ಅಥವಾ ಖಾಸಗಿ ಆಸ್ಪತ್ರೆಗೆ ಕಳಿಸಬೇಕಾದ ಅನಿರ್ವಾರ್ಯತೆ ಆರೋಗ್ಯ ಇಲಾಖೆಯದ್ದಾಗಿದೆ.

ಇದರ ನಡುವೆ ಆರೋಗ್ಯ ಇಲಾಖೆ ಸಿಬ್ಬಂದಿಗಳ ಕೊರತೆ, ಆಕ್ಸಿಜನ್ ಕೊರತೆಯಿಂದಾಗಿ ಸಾವುನೋವುಗಳು ಉಂಟಾಗುತ್ತಿರುವುದು ಜನರ ಆತಂಕ ಹೆಚ್ಚಿಸಿದೆ. ತಾಲೂಕಿನ ಬಹುತೇಕ ಆರೋಗ್ಯ ಕೇಂದ್ರಗಳ ವೈದ್ಯರನ್ನು ಕರೊನಾ ಚಿಕಿತ್ಸೆಗೆ, ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕರ್ತವ್ಯಕ್ಕೆ ನೇಮಿಸಿರುವುದರಿಂದ ತಾಲೂಕಿನ ಜನತೆಗೆ ಸಮರ್ಪಕವಾದ ಚಿಕಿತ್ಸಾ ಸೌಲಭ್ಯ ದೊರಕುತ್ತಿಲ್ಲ ಎಂಬ ಆರೋಪ ವ್ಯಾಪಕವಾಗಿದೆ.

ಈ ಎಲ್ಲಾ ಘಟನಾವಳಿಗಳನ್ನು ಗಮನಿಸಿದರೆ ತಾಲೂಕಿಗೆ ಜಿಲ್ಲಾ ಆಸ್ಪತ್ರೆಯ ಅವಶ್ಯಕತೆ ಎಷ್ಟಿದೆ ಎಂಬುದು ಅರಿವಾಗುತ್ತದೆ‌. ಆದರೆ ವಿರೋಧ ಪಕ್ಷದ ಶಾಸಕರೆಂಬ ಕಾರಣಕ್ಕೆ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅನುಮೋದನೆ ನೀಡಿತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಮಲತಾಯಿ ಧೋರಣೆ: ಶಾಸಕ ಟಿ.ವೆಂಕಟರಮಣಯ್ಯ

ದೊಡ್ಡಬಳ್ಳಾಪುರ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡುವಂತೆ ಪದೇ ಪದೇ ಮನವಿ ಮಾಡಿದರು ರಾಜ್ಯ ಸರ್ಕಾರ ಸ್ಪಂದಿಸದೆ ಮಲತಾಯಿ ಧೋರಣೆ ಮಾಡುತ್ತಿದೆ. ಈ ಹಿಂದೆ ಪೂರ್ತಿ ಪ್ರಮಾಣದ ಸಂಪುಟ ವಿಸ್ತರಣೆ ನಂತರ ಅನುಮೋದನೆ ‌ನೀಡಲಾಗುವುದು ಎಂದು ಉತ್ತರ ನೀಡಲಾಗಿತ್ತು. ಆದರೆ ಈ ವೇಳೆ ಯಾವುದೇ ಉತ್ತರ ನೀಡದೆ ಸಚಿವ ಸಂಪುಟ ನಿರ್ಣಯ ಮುಂದೂಡುವ ಮೂಲಕ ಕರೊನಾ ಕಷ್ಟದ ಸಂಧರ್ಭದಲ್ಲಿ ಜನರಿಗೆ ಬಹು ಅಗತ್ಯವಾಗಿದ್ದ ಸೌಲಭ್ಯದಿಂದ ವಂಚಿತರನ್ನಾಗಿಸುತ್ತಿದೆ.

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]