ಬೆಂ.ಗ್ರಾ.ಜಿಲ್ಲೆ: ಜವಾಹರ್ ನವೋದಯ ವಿದ್ಯಾಲಯ ವತಿಯಿಂದ 2021-22ನೇ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು www.navodaya.gov.in ರಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ www.jnvbangalorerural ವೀಕ್ಷಿಸಬಹುದು.
ವಿದ್ಯಾರ್ಥಿ 2020-21ನೆ ಸಾಲಿನಲ್ಲೇ ಐದನೇಯ ತರಗತಿಯನ್ನು ಸರ್ಕಾರಿ ಅಥವಾ ಸರ್ಕಾರಿ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಓದಿರಬೇಕು. 3 ಮತ್ತು 4ನೇ ತರಗತಿಗಳನ್ನು ಸರ್ಕಾರಿ ಅಥವಾ ಸರ್ಕಾರಿ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಓದಿರಬೇಕು. ಹಾಗೂ ಮುಖ್ಯೋಪಾಧ್ಯಾಯರಿಂದ ವಿದ್ಯಾರ್ಥಿಯ ವಿವರಗಳೊಂದಿಗೆ ಪ್ರಮಾಣಪತ್ರವನ್ನು ಪಡೆದು ಆನ್‍ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಯ ಆಯ್ಕೆಯಾದಲ್ಲಿ ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯನ್ನು ದಾಖಲಾತಿ ಸಮಯದಲ್ಲಿ ಪ್ರಸ್ತುತಪಡಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಏಪ್ರಿಲ್ 10 ರಂದು ಪರೀಕ್ಷೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ 8116438494 ಅನ್ನು ಸಂಪರ್ಕಿಸಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಆರ್.ಚಕ್ರವರ್ತಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

