ನವದೆಹಲಿ: 65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಅಂಗವಾಗಿ ನಾಡಿನ ಜನತೆಗೆ ಕನ್ನಡದಲ್ಲಿ ಟ್ವಿಟ್ ಮಾಡುವ ಮೂಲಕ ಪ್ರಧಾನಿ ಮೋದಿ ಶುಭಾಶಯಗಳನ್ನು ತಿಳಿಸಿದ್ದಾರೆ.
ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

