ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ನಿವಾಸಿ ಅಂತರಾಷ್ಟ್ರೀಯ ಕ್ರೀಡಾಪಟು ರಂಜಿತ್.ಎಮ್ ಅವರು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಥ್ರೋ ಬಾಲ್ ಕ್ರೀಡೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಸಲುವಾಗಿ ಇವರಿಗೆ ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ.
ನಗರದ ವೀರಭದ್ರನಪಾಳ್ಯದ ನಿವಾಸಿಗಳಾದ ಮೋಹನ್, ಗೌರಮ್ಮ ದಂಪತಿಗಳ ಮಗನಾದ ರಂಜಿತ್ ಸುಮಾರು 4 ಅಂತಾರಾಷ್ಟ್ರೀಯ, 7 ರಾಷ್ಟ್ರೀಯ ಮಟ್ಟದ ಥ್ರೋ ಬಾಲ್ ಕ್ರೀಡೆಯಲ್ಲಿ 4 ಚಿನ್ನದ ಪದಕ ಹಾಗೂ 1 ಬೆಳ್ಳಿ ಪದಕ ಪಡೆದಿದ್ದಾರೆ.
ಕರ್ನಾಟಕ ಸರ್ಕಾರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯವತಿಯಿಂದ ನ.2 ರಂದು ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶಸ್ತಿ ನೀಡಲಿದ್ದಾರೆಂದು ಪ್ರಕಟಣೆ ತಿಳಿಸಿದೆ.

