ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 9 ಜನರಿಗೆ ಸೋಂಕು ಧೃಡ ಪಟ್ಟಿದ್ದು, ಸೊಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 65 ವರ್ಷದ ಪುರುಷ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಮಂಗಳವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 6 ಪುರುಷರು ಹಾಗೂ 3 ಮಹಿಳೆಯರು ಸೇರಿ 9 ಜನರಿಗೆ ಸೋಂಕು ದೃಢಪಟ್ಟಿದೆ.
ಹರಿತಲೇಖನಿಗೆ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಅನ್ವಯ ಆಕಾಶ್ ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿದ್ದ ಗುಡ್ಡದಹಳ್ಳಿಯ 65 ವರ್ಷದ ಪುರುಷ ತೀವ್ರ ಉಸಿರಾಟದ ತೊಂದರೆಯಿಂದ ಸಾವನಪ್ಪಿದ್ದಾರೆ. ಇವರಿಗೆ ಅನಿಯಂತ್ರಿತ ಸಕ್ಕರೆ ಕಾಯಿಲೆ ಇತ್ತು ಎನ್ನಲಾಗಿದೆ.
ಪ್ರಸ್ತುತ ತಾಲೂಕಿನಲ್ಲಿ 4341 ಮಂದಿಗೆ ಕರೊನಾ ಸೋಂಕು ತಗುಲಿದ್ದು 4135 ಮಂದಿ ಗುಣಮುಖರಾಗಿದ್ದರೆ, ಸಕ್ರಿಯ ಕರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ 255 ಆಗಿದೆ.
ಉಳಿದಂತೆ ಸೋಂಕಿಗೆ ಒಳಗಾದ 52 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 153 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

