ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಅಂತರರಾಷ್ಟ್ರೀಯ ಥ್ರೋಬಾಲ್ ಕ್ರೀಡಾಪಟು, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ವಿಜೇತ ರಂಜಿತ್ರನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸನ್ಮಾನಿಸಿ ಗೌರವಿಸಿದರು.
ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿಂದು, ದೊಡ್ಡಬಳ್ಳಾಪುರದ ಅಂತರರಾಷ್ಟ್ರೀಯ ಥ್ರೋಬಾಲ್ ಕ್ರೀಡಾಪಟು, ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ವಿಜೇತ ರಂಜಿತ್ ಅವರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಯುವಜನ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಆರ್.ಗೀತಾ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಅಜಿತ್ ಕುಮಾರ್ ರೈ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಕನ್ನಡ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರದ ವತಿಯಿಂದ ನ.1ರಂದು ವಿಧಾನಸೌದದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಂಜಿತ್ ಅವರಿಗೆ ಮುಖ್ಯಮಂತ್ರಿ ವಿ.ಎಸ್.ಯಡಿಯೂರಪ್ಪ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಿದ್ದರು.

