ಬೆಂಗಳೂರು: ರಿಪಬ್ಲಿಕ್ ಚಾನಲ್ ಮುಖ್ಯಸ್ಥ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ಖಂಡಿಸಿ ಬಿಜೆಪಿ ಯುವ ಮೂರ್ಚಾವತಿಯಿಂದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಯುವ ಮೋರ್ಚಾ ಸದಸ್ಯರು ಮಹಾರಾಷ್ಟ್ರ ಸರ್ಕಾರದ ವಿರುದ್ದ ದಿಕ್ಕಾರ ಕೂಗಿದರು.
ಈ ವೇಳೆ ಮಾತನಾಡಿದ ನಗರ ಬಿಜೆಪಿ ಅಧ್ಯಕ್ಷ ಹೆಚ್.ಎಸ್.ಶಿವಶಂಕರ್ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮತ್ತು ಪತ್ರಿಕಾರಂಗ ಪ್ರಜಾಪ್ರಭುತ್ವ ನಾಲ್ಕು ಸ್ತಂಭಗಳಾಗಿವೆ. ಮಹಾರಾಷ್ಟ್ರದ ಉದ್ಧವ್ ಠಾಕ್ರೆ ಅವರು ರಾಜಕೀಯ ವೈಷಮ್ಯದಿಂದ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಯುವ ಮೋರ್ಚಾ ತಾಲ್ಲೂಕು ಅಧ್ಯಕ್ಷ ಕಿರಣ್ .ಬಿ.ಎ, ನಗರ ಘಟಕ ಅಧ್ಯಕ್ಷ ಶಿವರಾಜ್, ಪ್ರಧಾನ ಕಾರ್ಯದರ್ಶಿ ಮುನಿರಾಜು, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ವಿ,ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ವತ್ಸಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಿರಿಜಾ, ಮುಖಂಡರಾದ ಸದಾಶಿವಪ್ಪ, ಮುದ್ದಪ್ಪ,ರಾಘವ, ಬಾಲು, ಸುಬ್ಬು, ಓಬಿಸಿ ಪ್ರಧಾನ ಕಾರ್ಯದರ್ಶಿ ಮಂಜುನಾಥ್,ನಗರ ಕಾರ್ಯದರ್ಶಿ ಶೇಖರ್, ತಾಲ್ಲೂಕು ಯುವ ಮೋರ್ಚಾ ಉಪಾಧ್ಯಕ್ಷ ಗೋವಿಂದರಾಜು, ಕಾರ್ಯದರ್ಶಿಗಳಾದ ಯಶವಂತ್ ರಾಜಘಟ್ಟ ಹಾಗೂ ಚಂದ್ರು ಮಂಚನಬೆಲೆ, ಪ್ರಧಾನ ಕಾರ್ಯದರ್ಶಿ ಲೋಕೇಶ್ ನಾಗಸಂದ್ರ, ಉಪಾಧ್ಯಕ್ಷ ನರೇಶ್ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

