ದೊಡ್ಡಬಳ್ಳಾಪುರ: ಕೋವಿಡ್ – 19 ಸೋಂಕಿತರಲ್ಲಿ ಉಂಟಾಗುವ ಆತಂಕದ ಮಟ್ಟವನ್ನು ಮತ್ತು ಒತ್ತಡವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಾಲೂಕಿನಲ್ಲಿ ಉಚಿತ ಮಾನಸಿಕ ಆರೋಗ್ಯ ಸಹಾಯವಾಣಿಯನ್ನು ನವೋದಯ ಚಾರಿಟಬಲ್ ಟ್ರಸ್ಟ್ ಮತ್ತು ಆರೋಗ್ಯ ಇಲಾಖೆಯ ಸಮ್ಮಿಶ್ರ ಆಶ್ರಯದಲ್ಲಿ ಚಾಲನೆ ನೀಡಲಾಗಿದೆ.
ಈ ಕಾರ್ಯಕ್ರಮವನ್ನು ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಮಾನಸಿಕ ಅರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಬಿ.ಎನ್.ಶಾಂತಲಾ ರವರು ಉದ್ಘಾಟಿಸಿ ಮಾತನಾಡಿದ ಅವರು ಕೋವಿಡ್ ಸೋಂಕಿತರು ಆತಂಕಕ್ಕೆ ಮತ್ತು ಒತ್ತಡಕ್ಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ತುತ್ತಾಗುತ್ತಿದ್ದು ಈ ಕಾರ್ಯಕ್ರಮ ಸಾರ್ವಜನಿಕರಿಗೆ ಅವಶ್ಯಕ ಎಂದರು.
ನವೋದಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ನವೋದಯ ಚೇತನ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಕೋವಿಡ್ ಸೋಂಕಿತರು ಸೋಂಕಿಗೆ ಒಳಗಾಗಿ ಕರೊನ ವೈರಸ್ ಅನ್ನು ಹೆದರಿಸುವುದಲ್ಲದೆ ಮಾನಸಿಕ ಕಾಯಿಲೆಗಳಾದ ಒತ್ತಡ ಮತ್ತು ಆತಂಕಕ್ಕೆ ಒಳಗಾಗಿ ಇವುಗಳನ್ನು ಎದುರಿಸುವಂತಹ ಸನ್ನಿವೇಶಗಳು ಹೆಚ್ಚಾಗುತ್ತಿದೆ, ಆದ್ದರಿಂದ ಅವರ ಮನಸ್ಥಿತಿಯ ಮೇಲೆ ಆಗುವ ಏರುಪೇರುಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ನಿರಂತರವಾಗಿ ತಾಲ್ಲೂಕಿನ ಸಾರ್ವಜನಿಕರಿಗೆ ಅನುಕೂಲವಾಗುವಂತೆ ನವೋದಯ ಚಾರಿಟೇಬಲ್ ಟ್ರಸ್ ಈ ಕಾರ್ಯಕ್ರಮವನ್ನು ರೂಪಿಸಿದೆ. ಯಾವುದೇ ರೀತಿಯ ಮಾನಸಿಕ ಸಲಹೆಗಳಿಗಾಗಿ ಉಚಿತ ಸಹಾಯವಾಣಿ 9880888438 ಗೆ ಯಾವುದೇ ಸಮಯದಲ್ಲಿ ಕರೆ ಮಾಡಿ ಇದರ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾ.ಪರಮೇಶ್ವರ, ಜಿಲ್ಲಾ ಮಾನಸಿಕ ಆರೋಗ್ಯ ವೈದ್ಯಾಧಿಕಾರಿ ಡಾ.ಗಿರೀಶ್, ಕಾನೂನು ಸಲಹೆಗಾರ ಮಂಜುನಾಥ್, ಕಾರ್ಯಕ್ರಮ ಸಂಯೋಜಕರಾದ ಜನಾರ್ಧನ ಮತ್ತಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

