ಬೆಂ.ಗ್ರಾ.ಜಿಲ್ಲೆ: ಪ್ರೋತ್ಸಾಹಧನಕ್ಕಾಗಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2019-20 ನೇ ಶೈಕ್ಷಣಿಕ ವರ್ಷದಲ್ಲಿ ನಡೆದ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸಮಾಜ ಕಲ್ಯಾಣ ಇಲಾಖೆ ವೆಬ್‍ಸೈಟ್ www.sw.kar.nic.inನಲ್ಲಿ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು 2020ರ ನವೆಂಬರ್ 21 ಕೊನೆಯ ದಿನವಾಗಿದೆ.

ಎಸ್.ಎಸ್.ಎಲ್.ಸಿ ಅಂಕಪಟ್ಟಿ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಹಿಂದಿನ ತರಗತಿಯ ವ್ಯಾಸಂಗ ಪ್ರಮಾಣ ಪತ್ರ/ಅಂಕಪಟ್ಟಿಗಳು, ಚಾಲ್ತಿಯಲ್ಲಿರುವ ವಿದ್ಯಾರ್ಥಿಗಳ ವೈಯಕ್ತಿಕ ಬ್ಯಾಂಕ್ ಖಾತೆಯ ವಿವರ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಇಲಾಖಾ ವೆಬ್‍ಸೈಟ್‍ನಲ್ಲಿ ಅರ್ಜಿ ಸಲ್ಲಿಸಿ, ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿದ ನಂತರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬಳಿ ಇರುವ ಜಿಲ್ಲಾಡಳಿತ ಭವನದಲ್ಲಿರುವ ಕೊಠಡಿ ಸಂಖ್ಯೆ: 217, 2ನೇ ಮಹಡಿ ಇಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಛೇರಿಗೆ ದೃಢೀಕೃತ ದಾಖಲಾತಿಗಳನ್ನು ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ದೂ.ಸಂ.: 080-29787447, ಸಹಾಯಕ ನಿರ್ದೇಶಕರು, ದೇವನಹಳ್ಳಿ ದೂ.ಸಂ.:080-7681784, ದೊಡ್ಡಬಳ್ಳಾಪುರ ದೂ.ಸಂ.: 080-7623681, ಹೊಸಕೋಟೆ ದೂ.ಸಂ.: 080-7931528, ನೆಲಮಂಗಲ ದೂ.ಸಂ.: 080-7723172 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಹನುಮಂತರಾಯಪ್ಪ.ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ ಬಿ.ಮುನೇಗೌಡ ಬೆಂಬಲಿಗರ ಸಭೆ..!

ನಿಖಿಲ್ ಕಾರ್ಯಕ್ರಮಕ್ಕೆ ದೊಡ್ಡಬಳ್ಳಾಪುರ JDS ಕಾರ್ಯಕರ್ತರ ಆಕ್ರೋಶದ ಬಿಸಿ.?: ಹುಸ್ಕೂರು ಆನಂದ್ ನೇತೃತ್ವದಲ್ಲಿ

ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ (JDS) ಪಕ್ಷದಲ್ಲಿ ಆಕ್ರೋಶ ಸ್ಪೋಟವಾಗಿದ್ದು, ಬಿ.ಮುನೇಗೌಡ (B.Mine Gowda, ಹುಸ್ಕೂರು ಆನಂದ್ (Huskur Anand), ಬೆಂಬಲಿಗರು ಇಂದು ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ 500ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರು ಸಭೆ ಸೇರಿ,

[ccc_my_favorite_select_button post_id="121521"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]