ಬೆಂಗಳೂರು: ಕರೊನಾ ಹಿನ್ನೆಲೆ ದೀಪಾವಳಿ ದಿನದಂದು ಪಟಾಕಿ ನಿಷೇಧ ಮಾಡುವುದಾಗಿ ಇಂದು ಬೆಳಗ್ಗೆಯಷ್ಟೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಯೂಟರ್ನ್ ಹೊಡೆದಿದ್ದಾರೆ.
ಇಂದು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿ ಮಾತನಾಡಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ದೀಪಾವಳಿಗೆ ಯಾವುದೇ ರೀತಿಯ ಪಟಾಕಿಗೆ ಅವಕಾಶ ಇರೋದಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದಿಂದ ಪಟಾಕಿ ನಿಷೇಧಕ್ಕೆ ನಿರ್ಧಾರ ಮಾಡಲಾಗಿದೆ. ಅಲ್ಲದೆ ಪಟಾಕಿ ನಿಷೇಧಿಸಿ ಸರ್ಕಾರದಿಂದ ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವುದಾಗಿ ತಿಳಿಸಿದ್ದರು.
ಈ ಹೇಳಿಕೆ ಬೆನ್ನೆಲ್ಲೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂಗಳ ಆಚರಣೆಯ ಮೇಲೆ ಮಾತ್ರ ಸರ್ಕಾರದ ಕಡಿವಾಣ ಎಂಬ ಆಕ್ರೋಶ ವ್ಯಕ್ತವಾಗಿತ್ತು.
ಇಂದು ಸಂಜೆ ಬಿಡುಗಡೆಯಾದ ಆದೇಶದಂತೆ ದೀಪಾವಳಿ ಹಬ್ಬವನ್ನು ಸರಳ, ಭಕ್ತಿಪೂರ್ವಕವಾಗಿ ಆಚರಿಸುವುದು ಸೂಕ್ತ. ಹಸಿರು ಪಟಾಕಿಯನ್ನು ಮಾತ್ರ ಬಳಸಿ ದೀಪಾವಳಿಯನ್ನು ಸರಳ, ಸುಂದರವಾಗಿ ಆಚರಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಣೆ ಹೊರಡಿಸಿ ಪಟಾಕಿಗೆ ಪರೋಕ್ಷವಾಗಿ ಹಸಿರು ನಿಶಾನೆ ತೋರಿದ್ದಾರೆ.
ಇನ್ನು ಈ ಆದೇಶ ಸಹ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು.ಹಸಿರು ಪಟಾಕಿ ಎಂದರೆ ಯಾವುದೂ.? ಬಾಂಬ್ ಬಳಸಬೇಕೆ.!ಎಂಬ ಪ್ರಶ್ನೆ ನೆಟ್ಟಿಗರದ್ದು….
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

