ದೊಡ್ಡಬಳ್ಳಾಪುರ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದಲ್ಲಿ ಕೆಲಸ ಮಾಡಿ ಅನುಭವ ಇರುವವರನ್ನು ಆಯ್ಕೆ ಮಾಡಿದರೆ ಉತ್ತಮ ಆಡಳಿತ ಸಾಧ್ಯವಾಗಲಿದೆ ಎಂದು ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ ಹೇಳಿದರು.
ಅವರು ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ಪರವಾಗಿ ಶುಕ್ರವಾರ ನಡೆದ ಪ್ರಚಾರ ಸಭೆಗಳಲ್ಲಿ ಮಾತನಾಡಿದರು.
ಕಾಂಗ್ರೆಸ್ ಪಕ್ಷದಿಂದ ಟಿಎಪಿಎಂಸಿಎಸ್ನ ‘ಎ’ ತರಗತಿಯ 4 ಹಾಗೂ ‘ಬಿ’ ತರಗತಿಯ 9 ಸ್ಥಾನಗಳಿಗು ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ. ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿ ನಿವೃತ್ತರಾಗಿರುವ ಜಿ.ಎನ್.ರಂಗಪ್ಪ ಅವರು ಸಹ ನಮ್ಮ ಪಕ್ಷದಿಂದ ಸ್ಪರ್ಧಿಸಿರುವುದು ಸಂತಸ ತಂದಿದೆ. ಸಹಕಾರಿ ಸಂಸ್ಥೆಯ ಆಡಳಿತದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಹಲವಾರು ಜನ ಅನುಭವಿ ಸಹಕಾರಿಗಳು ಇದ್ದಾರೆ. ತಾಲ್ಲೂಕಿನಲ್ಲಿ ಸಹಕಾರಿ ಕ್ಷೇತ್ರದಲ್ಲಿ ಟಿಎಪಿಎಂಸಿಎಸ್ ಮಹತ್ವದ ಸಂಸ್ಥೆಯಾಗಿದೆ. ಹಿರಿಯ ರಾಜಕಾರಣಿ ಜಿ.ರಾಮೇಗೌಡ ಅವರಿಂದ ಸ್ಥಾಪಿತವಾದ ಸಂಘ ಇಂದು ಬೃಹತ್ ಸಂಸ್ಥೆಯಾಗಿ ಬೆಳೆದಿದೆ. ಈ ಸಂಘವನ್ನು ಮತ್ತಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ತಾಲ್ಲೂಕಿನ ಪಕ್ಷದ ಹಿರಿಯರು ಹಾಗೂ ಶಾಸಕರು ಉತ್ತಮ ಅಭ್ಯರ್ಥಿಗಳನ್ನು ಈ ಬಾರಿ ಚುನಾವಣೆಗೆ ಟಿಕೆಟ್ ನೀಡಿದ್ದು ನಮ್ಮ ಪಕ್ಷದ ಎಲ್ಲಾ ಅಭ್ಯರ್ಥಿಗಳು ಜಯಗಳಿಸುವ ವಿಶ್ವಾಸ ಇದೆ ಎಂದರು.
ಪ್ರಚಾರ ಸಭೆಯಲ್ಲಿ ತೂಬಗೆರೆ ಹೋಬಳಿ ಕಾಂಗ್ರೆಸ್ ಮುಖಂಡರಾದ ಎಸ್.ಆರ್.ಮುನಿರಾಜು, ಶ್ರೀಧರ್, ಅಂಜಿನಪ್ಪ, ಜಗನ್ನಾಥಚಾರ್, ಎಸ್.ದಯಾನಂದ್, ಆರೂಡಿ ಹರೀಶ್, ನಂಜಪ್ಪ, ಮುನೇಗೌಡ, ತಾಲ್ಲೂಕು ಪಂಚಾಯಿತಿ ಸದಸ್ಯ ನಾರಾಯಣಗೌಡ, ಕಿಟ್ಟಿ ಇದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

