ಉಪಚುನಾವಣೆ ಫಲಿತಾಂಶ ಪ್ರಜಾಪ್ರಭುತ್ವದ ಸೋಲು: ಸಿದ್ದರಾಮಯ್ಯ

ಬೆಂಗಳೂರು: ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಸೋಲನ್ನು ನಾವು ವಿನೀತರಾಗಿ ಒಪ್ಪಿಕೊಂಡಿದ್ದೇವೆ. ಆದರೆ ಇದು ಪ್ರಜಾಪ್ರಭುತ್ವದ ಸೋಲು. ಅಕ್ರಮ ಗಳಿಕೆಯ ಹಣ ಮತ್ತು ಆಡಳಿತ ಯಂತ್ರದ ದುರುಪಯೋಗಕ್ಕೆ ಸಿಕ್ಕಿರುವ ಗೆಲುವು ಎನ್ನುವುದು ವಿಷಾದದ ಸಂಗತಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಮತ್ತು ಶಿರಾ ಕ್ಷೇತ್ರದ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿನ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ಸಾಮಾನ್ಯವಾಗಿ ಉಪಚುನಾವಣೆಗಳಲ್ಲಿ ಅಧಿಕಾರರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುತ್ತಾರೆ. ಆಡಳಿತ ಪಕ್ಷದ ಶಾಸಕರಿದ್ದರೆ ತಮ್ಮ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ ಎಂಬ ಅಭಿಪ್ರಾಯ ಜನರಲ್ಲಿರುತ್ತದೆ. ಇದೇ ಫಲಿತಾಂಶ ಸಾಮಾನ್ಯ ಚುನಾವಣೆಯಲ್ಲಿ ನಿರೀಕ್ಷಿಸಲಾಗದು. 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವನ್ನು ಸ್ವೀಕರಿಸಲೇಬೆಕು. ನಾವೂ ಒಪ್ಪಿಕೊಂಡಿದ್ದೇವೆ. ಇದರಿಂದ ಪಕ್ಷದ ಕಾರ್ಯಕರ್ತರು ಕಂಗೆಡಬೇಕಾಗಿಲ್ಲ. ಇದರಿಂದ ಯಾವ ಪಕ್ಷವೂ ಬಲಶಾಲಿಯಾಗುವುದಿಲ್ಲ, ಯಾವ ಪಕ್ಷವೂ ಬಲಹೀನವಾಗುವುದೂ ಇಲ್ಲ. ಇದು ಸಮಗ್ರ ರಾಜ್ಯದ ಜನಾಭಿಪ್ರಾಯ ಅಲ್ಲ, ಇದು ಎರಡು ಸ್ಥಾನಗಳಿಗೆ ನಡೆದ ಚುನಾವಣೆ. 

ನಾನು ಮುಖ್ಯಮಂತ್ರಿಯಾಗಿದ್ದಾಗ ಜನರಿಗೆ ಒಳ್ಳೆಯದಾಗಲಿ, ನಮ್ಮ ಶಾಸಕನೂ ರಾಜಕೀಯವಾಗಿ ಜನಪ್ರಿಯನಾಗಲಿ ಎಂದು ಆರ್.ಆರ್.ನಗರಕ್ಕೆ ಸುಮಾರು ರೂ.2000 ಕೋಟಿ ಕಾಮಗಾರಿಯನ್ನು ಮಂಜೂರು ಮಾಡಿದ್ದೆ. ಅದರ ಫಲ ನಮ್ಮ ಪಕ್ಷಕ್ಕೆ ಸಿಗಲಿಲ್ಲ, ಅವರಿಗೆ ಸಿಕ್ಕಿದೆ. 

ಮುನಿರತ್ನ ಅವರು ಪಕ್ಷಾಂತರ ಮಾಡಿದ ದಿನದಿಂದ ಚುನಾವಣಾ ತಯಾರಿ ಪ್ರಾರಂಭಿಸಿದ್ದರು. ನಾವು ನಮ್ಮ ಅಭ್ಯರ್ಥಿಯ ಆಯ್ಕೆಯನ್ನು ಸ್ವಲ್ಪ ತಡವಾಗಿ ಮಾಡಿದೆವು, ಇದರಿಂದಾಗಿ ಪ್ರಚಾರ ವಿಳಂಬವಾಗಿ ಪ್ರಾರಂಭಿಸಬೇಕಾಯಿತು. ಸೋಲಿಗೆ ಇದೂ ಒಂದು ಕಾರಣ ಇರಬಹುದು. 

ಶಿರಾದಲ್ಲಿ ಟಿ.ಬಿ.ಜಯಚಂದ್ರ ಜನತೆಯ ಬದುಕು ಉಳಿಸುವ ನದಿನೀರು ಹರಿಸಿದ್ದರು. ಬಿಜೆಪಿಯವರು ಬಂದು ಅಕ್ರಮವಾಗಿ ಸಂಪಾದಿಸಿದ್ದ ಹಣದ ಹೊಳೆ ಹರಿಸಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಮಾರಕವಾದ ಬೆಳವಣಿಗೆ. ಜನರ ಸೇವೆ ಮಾಡಿದವರನ್ನು ಜನ ಪ್ರಾಮಾಣಿಕವಾಗಿ ಗುರುತಿಸಿ ಹರಸಬೇಕು. 

ಎರಡೂ ಕ್ಷೇತ್ರಗಳಲ್ಲಿ ಜೆಡಿಎಸ್ ಹೀನಾಯವಾಗಿ ಸೋತಿರುವುದರಿಂದ ಆ ಪಕ್ಷದ  ಮತಗಳು ಬಿಜೆಪಿ ಬುಟ್ಟಿಗೆ ಬಿದ್ದು ಅವರ ಗೆಲುವಿಗೆ ನೆರವಾಯಿತು. ಮುಖ್ಯವಾಗಿ ಶಿರಾದಲ್ಲಿ ಜೆಡಿಎಸ್ ತನ್ನ ಮತಗಳನ್ನಾದರೂ ಉಳಿಸಿಕೊಂಡಿದ್ದರೆ ಖಂಡಿತ ಬಿಜೆಪಿ ಇಷ್ಟು ಸುಲಭದಲ್ಲಿ ಗೆಲ್ಲುತ್ತಿರಲಿಲ್ಲ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬೌರಿಂಗ್ ಆಸ್ಪತ್ರೆ ದುರಂತ; ಹೆಚ್.ಡಿ. ದೇವೇಗೌಡ ದುಃಖ, ಹೆಚ್.ಡಿ. ಕುಮಾರಸ್ವಾಮಿ ದಿಗ್ಭ್ರಮೆ..

ಬುಧವಾರ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಗೋಡೆಯ ಕುಸಿದು ಏಳು ಮಂದಿ ಸಾವನಪ್ಪಿರುವ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="121541"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ ಭೀತಿ.!| Video ನೋಡಿ

ಏನಾಗುತ್ತಿದೆ IPLನಲ್ಲಿ? ಕ್ರಿಕೆಟ್ ಮೈದಾನದಲ್ಲೇ ವೇಪ್ ಸೇವನೆ.. ರಿಯಾನ್ ಪರಾಗ್ ಗೆ ಬಂಧನ

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ಪಂದ್ಯದ ವೇಳೆ ನಿಷೇಧಿತ 'ಇ-ಸಿಗರೇಟ್' (Vape) ಸೇವಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

[ccc_my_favorite_select_button post_id="121495"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]