ದೊಡ್ಡಬಳ್ಳಾಪುರ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ಕೊಡಿಸುವ ಸಲುವಾಗಿ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಪ್ರತಿಷ್ಟಿತ ವಸತಿ ಶಾಲೆಗಳಿಗೆ ದಾಖಲು ಮಾಡಿಸಿ, ಆ ವಸತಿಶಾಲೆಗಳಿಗೆ ಭರಿಸಬೇಕಾದ ಎಲ್ಲಾ ರೀತಿಯ ಶುಲ್ಕ, ಸಮವಸ್ತ್ರ, ಪಠ್ಯಪುಸ್ತಕ, ಪ್ರವಾಸ ಭತ್ಯೆ ಮತ್ತು ಇತರೆ ವೆಚ್ಚಗಳನ್ನು ಹಾಗೂ ವಸತಿ ಮತ್ತು ಬೋಜನಾ ವೆಚ್ಚವನ್ನು ಇಲಾಖಾವತಿಯಿಂದ ಭರಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಹೆಚ್.ಕೆ.ಸೋಮಶೇಖರ್ ತಿಳಿಸಿದ್ದಾರೆ.
2020-21ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪ್ರತಿಷ್ಟಿತ ಶಾಲೆಗಳಿಗೆ 6ನೇ ತರಗತಿಗೆ (ಆಂಗ್ಲ ಮಾಧ್ಯಮ) ಸೇರ ಬಯಸುವ ಅರ್ಹ ಪರಿಶಿಷ್ಟ ಜಾತಿ,ಪರಿಶಿಷ್ಟ ವರ್ಗದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಮತ್ತು ವಿವರಗಳನ್ನು ದೊಡ್ಡಬಳ್ಳಾಪುರದ ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿ ನಮೂನೆ ಮತ್ತು ದಾಖಲಾತಿಗಳನ್ನು ನ.30 ಒಳಗೆ ಅರ್ಜಿ ಸಲ್ಲಿಸಬೇಕು
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

