ದೊಡ್ಡಬಳ್ಳಾಪುರ: ತಾಲೂಕು ಪಂಚಾಯತಿ ಸದಸ್ಯ ಹಾಗೂ ಜೆಡಿಎಸ್ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸುನೀಲ್ ಕುಮಾರ್ ಜನ್ಮದಿನದ ಅಂಗವಾಗಿ ನ.11ರಂದು ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿನ ಯಾದವ ಸಮುದಾಯ ಭವನದಲ್ಲಿ, ಕರೊನಾ ವಾರಿಯರ್ಸ್ ಗಳಾಗಿ ಶ್ರಮಿಸಿದ ತೂಬಗೆರೆ ಹೋಬಳಿಯ ವೈದ್ಯಕೀಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಲಾಗಿದೆ ಎಂದು ಸುನೀಲ್ ಕುಮಾರ್ ಅಣ್ಣ ಅಭಿಮಾನಿಗಳ ಬಳಗ ಮಂಜುನಾಥ್ ತಿಳಿಸಿದ್ದಾರೆ.
ಹಲವು ವರ್ಷಗಳಿಂದ ಸುನೀಲ್ ಕುಮಾರ್ ಅಣ್ಣ ಅಭಿಮಾನಿಗಳ ಬಳಗದಿಂದ ವಿವಿಧ ರೀತಿಯ ಜನಪರ ಕಾರ್ಯಗಳ ಮೂಲಕ ಸುನೀಲ್ ಕುಮಾರ್ ಜನ್ಮದಿನದವನ್ನು ಆಚರಿಸಲಾಗುತ್ತಿದೆ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು, ಕನ್ನಡಪರ ಹೋರಾಟಗಾರರು, ಸಾಹಿತಿಗಳು, ಕರೊನಾ ವಾರಿಯರ್ಸ್ ಗಳು ಬಾಗವಹಿಸಲಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

