ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ 16 ಜನರಿಗೆ ಸೋಂಕು ಧೃಡ ಪಟ್ಟಿದ್ದು, 51 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಶುಕ್ರವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 10 ಪುರುಷರು, 6 ಮಹಿಳೆಯರಿಗೆ ಸೋಂಕು ದೃಢಪಟ್ಟಿದೆ.
ಸೋಂಕಿನ ಕಾರಣ ಆಕಾಶ್ ಆಸ್ಪತ್ರೆಗೆ ದಾಖಲಾಗಿದ್ದ ನಗರದ ತಾಲೂಕು ಕಚೇರಿ ರಸ್ತೆಯ 51ವರ್ಷದ ಪುರುಷ ಚಿಕಿತ್ಸೆ ಫಲಕಾರಿಯಾದೆ ಸಾವನಪ್ಪಿದ್ದಾರೆಂದು ಆರೋಗ್ಯ ಇಲಾಖೆ ಮೂಲಗಳು ಹರಿತಲೇಖನಿಗೆ ತಿಳಿಸಿವೆ.
ಪ್ರಸ್ತುತ ತಾಲೂಕಿನಲ್ಲಿ 4478 ಮಂದಿಗೆ ಕರೊನಾ ಸೋಂಕು ತಗುಲಿದ್ದು 4332 ಜನ ಗುಣಮುಖರಾಗಿದ್ದರೆ, 22 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಇಂದಿಗೆ ಕರೊನಾ ಸೋಂಕಿತರ ಸಕ್ರಿಯ ಪ್ರಕರಣಗಳ ಸಂಖ್ಯೆ 145 ಆಗಿದೆ.
ಉಳಿದಂತೆ ಸೋಂಕಿಗೆ ಒಳಗಾದ 50 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 95 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

