ಬೆಂಗಳೂರು: ಕಂದಾಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 18 ರಂದು ಮಧ್ಯಾಹ್ನ 2.00 ಗಂಟೆಗೆ ನಿಗದಿಯಾಗಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ 2020-21ನೇ ಸಾಲಿನ ಅಕ್ಟೋಬರ್-2020ರ ಮಾಹೆಯ ಅಂತ್ಯದವರೆಗಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯು ಅಧ್ಯಕ್ಷರ ಸೂಚನೆ ಮೇರೆಗೆ, *ನವೆಂಬರ್ 18 ರಂದು ಬೆಳಗ್ಗೆ 11.00 ಗಂಟೆಗೆ* ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷರಾದ ಕನ್ಯಾಕುಮಾರಿ, ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರವಿ.ಡಿ.ಚೆನ್ನಣ್ಣನವರ್ ಸೇರಿದಂತೆ ಜಿಲ್ಲೆಯ ಶಾಸಕರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್.ಎಂ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

