ದೊಡ್ಡಬಳ್ಳಾಪುರ: ತಾಲೂಕು ಆಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ಮಾಹಿತಿಯಂತೆ ತಾಲೂಕಿನ ನಾಲ್ವರಿಗೆ ಸೋಂಕು ದೃಢಪಟ್ಟಿದ್ದರೆ, ದೀಪಾವಳಿ ದಿನದ ಸಂಭ್ರಮದ ನಡುವೆ ಸೋಂಕಿಗೆ ಒಳಗಾಗಿ ಚಿಕಿತ್ಸೆಗೆ ದಾಖಲಾಗಿದ್ದ ತಾಲೂಕಿನ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಬಿಡುಗಡೆ ಮಾಡಿರುವ ತಾಲೂಕಿನ ಹೆಲ್ತ್ ಬುಲೆಟಿನ ಅನ್ವಯ, ಭಾನುವಾರದ ಸಂಜೆಯವರಗೆ, ದೊಡ್ಡಬಳ್ಳಾಪುರ ತಾಲೂಕಿನ 4 ಪುರುಷರಿಗೆ ಸೋಂಕು ದೃಢಪಟ್ಟಿದೆ.
ಆರೋಗ್ಯ ಇಲಾಖೆ ಹರಿತಲೇಖನಿಗೆ ನೀಡಿರುವ ವರದಿಯಂತೆ, ಆಕಾಶ್ ಆಸ್ಪತ್ರೆಗೆ ದಾಖಲಾಗಿದ್ದ ಹುಸ್ಕೂರು ಗ್ರಾಮದ 74 ವರ್ಷದ ಪುರುಷ ಹಾಗೂ ಚೈತನ್ಯನಗರದ 62 ವರ್ಷದ ಪುರುಷ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಪ್ರಸ್ತುತ ತಾಲೂಕಿನಲ್ಲಿ 4482 ಮಂದಿಗೆ ಕರೊನಾ ಸೋಂಕು ತಗುಲಿದ್ದು 4332 ಮಂದಿ ಗುಣಮುಖರಾಗಿದ್ದರೆ, ಸಕ್ರಿಯ ಕರೊನಾ ಸೋಂಕಿತರ ಪ್ರಕರಣಗಳ ಸಂಖ್ಯೆ 148 ಆಗಿದೆ.
ಉಳಿದಂತೆ ಸೋಂಕಿಗೆ ಒಳಗಾದ 50 ಮಂದಿಯನ್ನು ದೊಡ್ಡಬಳ್ಳಾಪುರ ಕೊವಿಡ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,ಉಳಿದ 98 ಮಂದಿಯನ್ನು ದೇವನಹಳ್ಳಿ / ಹಜ್ ಭವನ/ ಖಾಸಗಿ ಆಸ್ಪತ್ರೆ / ಹೊಂ ಹೈಸೋಲೇಷನ್ / ಇಸ್ತೂರಿನ ವಸತಿ ನಿಲಯ / ಬಚ್ಚಹಳ್ಳಿ ವಸತಿ ನಿಲಯ / ಬೆಂಗಳೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

