ಬೆಂಗಳೂರು: ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ಏಳು ತಿಂಗಳಿಂದ ಕಾಲೇಜುಗಳು ಸಂಪೂರ್ಣ ಬಂದ್ ಆಗಿದ್ದ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆಭವಾಗಲಿದೆ.
ನ.17 ರ ಮಂಗಳವಾರದಿಂದ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಕಾಲೇಜುಗಳನ್ನು ಸರಕಾರದ ತೀರ್ಮಾನದ ಮೇರೆಗೆ ರಾಜ್ಯಾದ್ಯಂತ ಪ್ರಾರಂಭಿಸಲು ಶಿಕ್ಷಣ ಸಂಸ್ಥೆಗಳು ಭರದ ಸಿದ್ಧತೆಗಳು ನಡೆಯುತ್ತಿವೆ.
ವಿಧ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಆರಂಭಿಕವಾಗಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಮಾತ್ರ ಭೌತಿಕ ತರಗತಿಗೆ ಹಾಜರಾಗಲು ಅವಕಾಶ ನೀಡಲಾಗಿದೆ. ಕೊಠಡಿ, ಮೇಜು, ಕುರ್ಚಿ ಸೇರಿದಂತೆ ಎಲ್ಲಾ ಪರಿಕರಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ. ಕೆಲವು ಕಾಲೇಜುಗಳಲ್ಲಿ ಸಿಬ್ಬಂದಿಗಳನ್ನು ಸಾಮೂಹಿಕವಾಗಿ ಕೊರೊನಾ ಪರೀಕ್ಷೆಗೊಳಪಡಿಸಲು ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ ಭೌತಿಕ ತರಗತಿಗಳಿಗೆ ಹಾಜರಾಗಲು ಇಷ್ಟವಿಲ್ಲದ ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಅವಕಾಶ ಕಲ್ಪಿಸಿದೆ. ಈ ವಿದ್ಯಾರ್ಥಿಗಳು ಪೋಷಕರಿಗೆ ಒಪ್ಪಿಗೆ ಪತ್ರ ಪಡೆದು ತರಗತಿಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ.
ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆ ಸೇರಿದಂತೆ ಇತರೆ ಇಲಾಖೆಗಳು ಕೂಡ ಶೇ.50ರಷ್ಟು ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗಳಲ್ಲಿಅವಕಾಶ ಕಲ್ಪಿಸಲು ಮುಂದಾಗಿವೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

