ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರಕ್ಕೆ ರೂ.50 ಕೋಟಿ ಘೋಷಿಸಿದ ಸಿಎಂ ಯಡಿಯೂರಪ್ಪರಿಗೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮವನ್ನು ಮಾಡಬೇಕೆಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮನವಿ ಮಾಡಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು, ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮವನ್ನು ಮಾಡಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸುತ್ತೇನೆ ಹಾಗೆಯೇ ಒಬಿಸಿ ಕಲ್ಪಿಸಿಕೊಡಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮೇಲೆ ಕಣ್ಣಿಟ್ಟು ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ನಿರ್ಧಾರಕ್ಕೆ ಸರ್ಕಾರ ಬಂದಿದೆ ಎಂದು ಹೇಳಲಾಗುತ್ತಿದ್ದರೆ ಇದರ ಬೆನ್ನಲ್ಲೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮ ಸ್ಥಾಪನೆ ಕೂಗು ಎದ್ದಿದೆ.
ರಾಜ್ಯದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ರೂ.50 ಕೋಟಿ ಒದಗಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿ, ರಾಜ್ಯದ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿಯವರಿಗೆ ಟಿಪ್ಪಣಿ ಕಳುಹಿಸಿದ್ದು, ರಾಜ್ಯದಲ್ಲಿ ಮರಾಠ ಜನಾಂಗ ಸಮುದಾಯ ಹೆಚ್ಚಿನ ಸಂಖಅಯೆಯಲ್ಲಿದ್ದು ಮರಾಠ ಸಮುದಾಯ ಆರ್ಥಿಕ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಅಭಿವೃದ್ಧಿಗಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಅವಶ್ಯಕತೆ ಇದೆ. ಅದರಂತೆ ಮರಾಠ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಾಗುತ್ತಿದೆ. ಇದಕ್ಕಾಗಿ ರೂ.50 ಕೋಟಿ ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

