ಹಾಸನ: ಹಾಸನದ ಅಧಿದೇವತೆ ಶ್ರೀ ಹಾಸನಾಂಬ ದೇವರ ದರ್ಶನೋತ್ಸವಕ್ಕೆ ತೆರೆ ಬಿದ್ದಿದೆ. ನ.5 ರಂದು ತೆರೆಯಲ್ಪಟ್ಟಿದ್ದ ದೇವಾಲಯದ ಬಾಗಿಲನ್ನು ಸಕಲ ಪೂಜಾ ವಿಧಿವಿಧಾನಗಳ ಮೂಲಕ ಇಂದು ಮಧ್ಯಾಹ್ನ 1.30ಕ್ಕೆ ಮುಚ್ಚಲಾಯಿತು.
ಕರೊನಾ ಹಿನ್ನಲೆಯಲ್ಲಿ ಈ ಬಾರಿ ಸಾರ್ವಜನಿಕರಿಗೆ ದರ್ಶನ ಅವಕಾಶ ಇರಲಿಲ್ಲ ಅದರೆ ಕೊನೆಯ ದಿನ ದೇವಾಲಯದ ಬಳಿ ಹಾಜರಿದ್ದ ಸಾರ್ವಜನಿಕರಿಗೂ ದೇವಿ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ. ಗೋಪಾಲಯ್ಯ, ಶಾಸಕ ಪ್ರೀತಂ ಜೆ. ಗೌಡ, ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ. ಪರಮೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಉಪ ವಿಭಾಗಾಧಿಕಾರಿ ಬಿ.ಎ.ಜಗದೀಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

