ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ (ಆಂಗ್ಲ ಮಾಧ್ಯಮ) ದಂಡುಪಾಳ್ಯ ಮತ್ತು ದೇವನಾಯಕನಹಳ್ಳಿ ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆ ಮುತ್ತೂರು ಲ, ಇಸ್ಲಾಂಪುರ ಮತ್ತು ವಿಜಯಪುರ ಶಾಲೆಗಳಲ್ಲಿ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ಅರ್ಹ ಶಿಕ್ಷಕರ ಹುದ್ದೆಗಳಿಗೆ ಗೌರವಧನದ ಆಧಾರದ ಮೇಲೆ, ಸ್ಥಳೀಯ ಅರ್ಹ ಅತಿಥಿ/ನಿವೃತ್ತಿ ಶಿಕ್ಷಕರುಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ತಮ್ಮ ಸ್ವವಿವರಗಳಿರುವ ( Biodata, Resume ) ಅರ್ಜಿಯನ್ನು ಅವಶ್ಯ ದಾಖಲೆಗಳೊಂದಿಗೆ ಸಲ್ಲಿಸಲು 2020ರ ನವೆಂಬರ್ 30 ಕೊನೆಯ ದಿನವಾಗಿದೆ.
ಹುದ್ದೆಯ ವಿವರಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ದೇವನಾಯಕನಹಳ್ಳಿ, ದೇವನಹಳ್ಳಿ ತಾಲ್ಲೂಕು, ಮೊ.ಸಂ.:8310397004, 9964184899, ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ದಂಡುಪಾಳ್ಯ, ಹೊಸಕೋಟೆ ತಾಲ್ಲೂಕು, ಮೊ.ಸಂ.: 9632933397, 8660971267, ಮುಖ್ಯಾಪಾಧ್ಯಾಯರು, ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆ, ಮುತ್ತೂರು ದೊಡ್ಡಬಳ್ಳಾಪುರ ತಾಲ್ಲೂಕು, ಮೊ.ಸಂ.:9880036772, ಜಿಲ್ಲಾ ಅಧಿಕಾರಿಗಳ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕೊಠಡಿ ಸಂಖ್ಯೆ: 216, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋ||, ದೇವನಹಳ್ಳಿ ತಾ||-562110, ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ.: 080-29787455 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

