ಬೆಂಗಳೂರು: ಮರಾಠ ಪ್ರಾಧಿಕಾರ ಆದೇಶದ ಕುರಿತು ತೀವ್ರಗೊಳ್ಳುತ್ತಿರುವ ಆಕ್ರೋಶ, ಹೋರಾಟದ ಹಿನ್ನೆಲೆ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದು, ಮರಾಠಿ ಭಾಷೆಗೂ ಪ್ರಾಧಿಕಾರಕ್ಕು ಯಾವುದೇ ಸಂಬಂಧವಿಲ್ಲವೆಂದಿದ್ದಾರೆ.
ಈ ಕುರಿತು ಟ್ವಿಟ್ ಮಾಡಿ ಸ್ಪಷ್ಟನೆ ನೀಡಿರುವ ಅವರು, ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಾಜ್ಯದಲ್ಲಿರುವ ಮರಾಠ ಜನಾಂಗದವರ ಅಭಿವೃದ್ಧಿಗಾಗಿ ರಚಿಸಲು ಉದ್ದೇಶಿಸಲಾಗಿದೆ. ಮರಾಠಿ ಭಾಷೆಗೂ ಈ ಪ್ರಾಧಿಕಾರಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದಾರೆ.
ಮರಾಠ ಜನಾಂಗದವರು ತಲಾತಲಾಂತರಗಳಿಂದ ಕರ್ನಾಟಕದಲ್ಲಿಯೇ ವಾಸವಾಗಿದ್ದು, ಆರ್ಥಿಕವಾಗಿ, ಸಾಮಾಜಿಕವಾಗಿ ಅವರ ಸರ್ವತೋಮುಖ ಅಭಿವೃದ್ಧಿಯಾಗಬೇಕು ಎನ್ನುವ ಆಶಯದಿಂದ ಈ ಪ್ರಾಧಿಕಾರವನ್ನು ಸ್ಥಾಪಿಸಲು ಕ್ರಮವಹಿಸಲಾಗುತ್ತಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

