ಸಂಪತ್ ರಾಜ್ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ: ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮೇಯರ್ ಸಂಪತ್‌ರಾಜ್ ವಿರುದ್ಧ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿದೆಯಷ್ಟೆ, ವಿಚಾರಣೆ ನಡೆಯುವ ಮೊದಲೆ ಅವರನ್ನು ಅಪರಾಧಿ ಅಥವಾ ನಿರಪರಾಧಿ ಎಂದು ನಿರ್ಧರಿಸಲಾಗುವುದಿಲ್ಲ. ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಶಿಕ್ಷೆಯಾಗುತ್ತೆ. ಈ ಹಂತದಲ್ಲಿ ನಾವು ಅವರ ಪರವೂ ಇಲ್ಲ, ವಿರುದ್ಧವೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಹೇಳಿದ್ದಾರೆ.

ಕೆಜಿ ಹಳ್ಳಿ, ಡಿಜಿ ಹಳ್ಳಿ ಗಲಭೆ ಪ್ರಕ್ರಣದ ಹಿನ್ನೆಲೆ ಮಾಜಿ ಮೇಯರ್ ಸಂಪತ್‌ರಾಜ್ ಬಂಧನ, ಶಾಲಾ ಕಾಲೇಜು ತೆರೆಯುವ ವಿಚಾರ, ಉಪಚುನಾವಣೆ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಹರಿಹಾಯ್ದು ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಲಾ-ಕಾಲೇಜು ತೆರೆಯದಂತೆ ಸರ್ಕಾರಕ್ಕೆ 2 ಬಾರಿ ಪತ್ರ ಬರೆದಿದ್ದೆ, ಆದರೂ ಇಂದು ಸರ್ಕಾರ ಪೂರ್ವತಯಾರಿ ಇಲ್ಲದೆ ಪದವಿ ಕಾಲೇಜುಗಳನ್ನು ಆರಂಭಿಸಿದೆ. ವಿದ್ಯಾರ್ಥಿಗಳ ಜೀವದ ಜೊತೆ ಚೆಲ್ಲಾಟ ಸರಿಯಲ್ಲ, ಕಾಲೇಜು ನಡೆಸಲೇಬೇಕು ಎಂದು ನಿರ್ಧರಿಸಿದ್ದರೆ ಸರ್ಕಾರವೇ ವಿದ್ಯಾರ್ಥಿಗಳ ನಿಯಮಿತ ಸೋಂಕು ಪರೀಕ್ಷೆಯನ್ನು ಮಾಡಿ, ತರಗತಿಗಳನ್ನು ನಡೆಸಬೇಕು. 

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 30,000 ಮರಾಠ ಸಮುದಾಯದ ಮತದಾರರಿದ್ದಾರೆ, ಅವರ ಓಲೈಕೆಗಾಗಿ ಸರ್ಕಾರ ಅಭಿವೃದ್ಧಿ ಪ್ರಾಧಿಕಾರ ರಚನೆಯ ನಿರ್ಧಾರ ಮಾಡಿದೆಯೇ ಹೊರತು ಅವರ ಸಾಮಾಜಿಕ ಹಾಗೂ ಆರ್ಥಿಕ ಪರಿಸ್ಥಿತಿ ಸುಧಾರಣೆ ಮಾಡುವ ನೈಜ ಕಾಳಜಿ ಬಿಜೆಪಿ ಸರ್ಕಾರಕ್ಕೆ ಇಲ್ಲ. ರಾಜ್ಯದಲ್ಲಿ ಹಲವಾರು ಹಿಂದುಳಿದ ಸಮುದಾಯಗಳು ಇನ್ನೂ ಇವೆ, ಅವುಗಳ ಅಭಿವೃದ್ಧಿಗೂ ಸರ್ಕಾರ ಪ್ರಾಧಿಕಾರ ರಚನೆ ಮಾಡಲಿ. ಮತ ಓಲೈಕೆ ಕಾರಣಕ್ಕಾಗಿ ಯಾವುದೋ ಒಂದು ಸಮುದಾಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಸರಿಯಲ್ಲ. ಅಭಿವೃದ್ಧಿಯ ಹಾದಿಯಲ್ಲಿ ಎಲ್ಲರು ಒಂದಾಗಿ ಸಾಗಿದಾಗ ಮಾತ್ರ ಸಮಾನತೆ ತರಲು ಸಾಧ್ಯ. 

ಈ ಬಾರಿಯ ಪ್ರವಾಹದಿಂದ ರಾಜ್ಯದಲ್ಲಿ ಸುಮಾರು ರೂ.25,000 ಕೋಟಿಗೂ ಅಧಿಕ ನಷ್ಟ ಸಂಭವಿಸಿದೆ, ಆದರೆ ಕೇಂದ್ರ ಸರ್ಕಾರದಿಂದ ಈ ವರೆಗೆ ಬಂದಿರುವುದು ರೂ.577 ಕೋಟಿ ಮಾತ್ರ. ಇದರಲ್ಲಿ ಎಷ್ಟು ಜನರಿಗೆ ನೆರೆ ಪರಿಹಾರ ನೀಡಲು ಸಾಧ್ಯ? ರಾಜ್ಯ ಸರ್ಕಾರದ ಬಳಿಯೂ ಹಣವಿಲ್ಲ, ಕೇಂದ್ರವೂ ನೀಡುತ್ತಿಲ್ಲ. ಹೀಗಾದರೆ ಜನರಿಗೆ ಯಾರು ದಿಕ್ಕು? ರೈತರ ಆದಾಯ ದುಪ್ಪಟ್ಟುಗೊಳಿಸ್ತೀವಿ ಅಂತ ಭರವಸೆ ನೀಡಿ, ಈಗ ಭತ್ತ, ಮೆಕ್ಕೆಜೋಳ ಮುಂತಾದ ಬೆಳೆಗಳಿಗೆ ಸರ್ಕಾರ ಬೆಂಬಲ ಬೆಲೆಯನ್ನೂ ನೀಡದೆ ರೈತರನ್ನು ಕಷ್ಟಕ್ಕೆ ತಳ್ಳಿ ಕೈತೊಳೆದುಕೊಂಡಿದೆ. ಇದರ ಮೇಲೆ ರೈತವಿರೋಧಿ ಕಾನೂನುಗಳನ್ನು ಬೇರೆ ಜಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಉಳ್ಳವರ ಸರ್ಕಾರದಲ್ಲಿ ಅನ್ನದಾತ ನರಳಾಡುತ್ತಿದ್ದಾನೆ.

ಬಿಜೆಪಿ ಮತ್ತು ಜೆಡಿಎಸ್‌ನ ಒಳ‌ಒಪ್ಪಂದದ ರಾಜಕಾರಣ ಹೊಸತಲ್ಲ. ಹಿಂದೆಯೂ  ಮಾಡಿಕೊಂಡಿದ್ದರು, ಕಳೆದ ಉಪಚುನಾವಣೆಯಲ್ಲೂ ಈ ಆರೋಪ ಇತ್ತು, ಮುಂದೆಯೂ ನಡೆಯಬಹುದು. ಅವಕಾಶವಾದಿ ರಾಜಕಾರಣ ಜೆಡಿಎಸ್‌ನ ನೈಜ ಸಿದ್ಧಾಂತ, ಇದನ್ನು ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಮುಂದುವರೆಸಿದ್ದಾರೆ ಎಂದು ಆರೋಪಿಸಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಹಾಗೂ ಟ್ವಿಟರ್ ಗಳಲ್ಲಿ ಲೈಕ್ ಮತ್ತು ಫಾಲೋ ಮಾಡಿ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]