ಮರಾಠ ಸಮುದಾಯ ನಿಗಮ ಸ್ಥಾಪನೆ ಸ್ವಾಗತಾರ್ಹ: ಕನ್ನಡ ನಾಡು ನುಡಿಗಳ ಬಗ್ಗೆ ನಮಗೆ ಅಪಾರ ಗೌರವವಿದೆ ದೊಡ್ಡಬಳ್ಳಾಪುರದಲ್ಲಿ ಮರಾಠ ಮುಖಂಡರ ಪ್ರತಿಕ್ರಿಯೆ

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರವು ಮರಾಠ ಸಮುದಾಯ ಅಭಿವೃದ್ದಿ ನಿಗಮ (ಮರಾಠ ಅಭಿವೃದ್ದಿ ಪ್ರಾಕಾರ) ಸ್ಥಾಪನೆ ಮಾಡಲು ಹೊರಟಿರುವುದು ಸ್ವಾಗತಾರ್ಹವಾಗಿದೆ. ಇದು ಭಾಷೆ ಆಧಾರಿತವಾಗಿರದೇ ಮರಾಠ ಜನಾಂಗದ ಅಭಿವೃದ್ದಿಗೆ ಪೂರಕವಾಗಿದ್ದು, ನಾವು ಯಾರ ಸವಲತ್ತುಗಳನ್ನು ಕಿತ್ತುಕೊಳ್ಳುತ್ತಿಲ್ಲ ಎಂದು ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದೊಡ್ಡಬಳ್ಳಾಪುರ ತಾಲೂಕು  ಘಟಕದ ಅಧ್ಯಕ್ಷ ಎಸ್.ಸುರೇಶ್ ರಾವ್ ಮಾನೆ  ಹೇಳಿದ್ದಾರೆ.

ನಗರದ ಶಾಂತಿನಗರದಲ್ಲಿನ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ದೊಡ್ಡಬಳ್ಳಾಪುರ ತಾಲೂಕು  ಘಟಕದ ಕಾರ್ಯಾಲಯದಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಹಲವಾರು ದಶಕಗಳಿಂದ ಕರ್ನಾಟಕದಲ್ಲಿ ವಾಸ ಮಾಡಿಕೊಂಡು ಕನ್ನಡಿಗರಂತೆಯೇ ನಾವು ಬದುಕುತ್ತಿದ್ದೇವೆ. ಆದರೆ ಕೆಲವು ಕಿಡಿಗೇಡಿಗಳು ರಾಜಕೀಯ ದುರುದ್ದೇಶದಿಂದ ಕನ್ನಡಿಗರನ್ನು ಮರಾಠಗರನ್ನು ಒಡೆದು ಆಳುತ್ತಿದ್ದಾರೆ. ಗಡಿ ಸಮಸ್ಯೆ, ಬಾಷೆ ವಿಚಾರಗಳನ್ನು ಮುಂದಿಟ್ಟುಕೊಂಡು ಶಾಂತಿ ಕದಡುತ್ತಿದ್ದಾರೆ. ಮರಾಠ ಸಮುದಾಯ ನಿಗಮವನ್ನು ನಾವು ನೀಡಿ ಎಂದು ಕೇಳಿರಲಿಲ್ಲ. ಆದರೆ ಆರ್ಥಿಕವಾಗಿ ಹಿಂದುಳಿದಿರುವ ಸಮುದಾಯ ಮುನ್ನಡೆಯಲು ಪೂರಕವಾಗಿ ಈ ನಿಗಮ ಅಸ್ತಿತ್ವಕ್ಕೆ ಬರುತ್ತಿರುವುದಕ್ಕೆ ನಮ್ಮ ಸಹಮತವಿದೆ. ಈ ವಿಚಾರದಲ್ಲಿ ಕನ್ನಡಪರ ಸಂಘಟನೆಗಳು ವಿರೋಧ ಮಾಡದೇ ಸಮುದಾಯದ ಹಿತದೃಷ್ಟಿಯಿಂದ ಸಹಕರಿಸಬೇಕಿದೆ. ಈ ವಿಚಾರವಾಗಿ ರಾಜ್ಯ ಬಂದ್ ಮಾಡುವುದು ಬೇಡ ಎಂದು ಮನವಿ ಮಾಡಿದರು.

ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಕಾನೂನು ಸಲಹೆಗಾರರಾದ ರವಿ ಮಾವಿನಕುಂಟೆ ಮಾತನಾಡಿ, ಮರಾಠ ಸಮುದಾಯ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಹಿಂದುಳಿದಿದ್ದು,ಸಮುದಾಯವನ್ನು ಮುಖ್ಯವಾಹಿನಿಗೆ ತರುವಲ್ಲಿ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕಿದ್ದು, ಮರಾಠ ಅಭಿವೃದ್ಧಿ ಸಮುದಾಯ ನಿಗಮ ಇದಕ್ಕೆ ಇಂಬು ನೀಡಲಿದೆ. ಕನ್ನಡ ನಾಡು ನುಡಿಗೆ ದಕ್ಕೆ ಬಂದಾಗಲೆಲ್ಲಾ ನಾವು ಹೋರಾಟಕ್ಕೆ ಇಳಿದಿದ್ದೇವೆ. ನಮ್ಮ ಸಮುದಾಯದ ಬಹಳಷ್ಟು ಮಂದಿ ವಿವಿಧ ಕನ್ನಡಪರ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿಗಮ ಸ್ಥಾಪನೆ  ಬೆಳಗಾವಿಗೆ ಮಾತ್ರ ಸೀಮಿತವಲ್ಲ.ಇದು ಇಡೀ ರಾಜ್ಯದ ಮರಾಠ ಸಮುದಾಯಕ್ಕೆ ನೆರವಾಗಲಿದೆ. ಬೆಳಗಾವಿ ಎಂದು ಸಹ ಕರ್ನಾಟಕದ ಭಾಗವಾಗಿದ್ದು, ಈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಖಂಡನೀಯವಾಗಿದೆ. ಗಡಿ ವಿಚಾರವನ್ನು ಕೆದಕಿ ಶಾಂತಿ ಭಂಗ ಮಾಡುತ್ತಿರುವ ಎಂ.ಇ.ಎಸ್ ಪುಂಡರನ್ನು ಸರ್ಕಾರ ಗಡಿ ಪಾರು ಮಾಡಲು ನಮ್ಮ ಅಭ್ಯಂತರವಿಲ್ಲ. ಸಮುದಾಯದ ಅಭಿವೃದ್ದಿಯನ್ನು ರಾಜಕೀಯವಾಗಿ ಬಳಸಿಕೊಂಡು ಜನರನ್ನು ದಿಕ್ಕು ತಪ್ಪಿಸುವುದಕ್ಕೂ ಸಹ ನಮ್ಮ ವಿರೋಧವಿದೆ ಎಂದರು.

ಸಭೆಯಲ್ಲಿ ತಾಲೂಕು ಕ್ಷತ್ರಿಯ ಮರಾಠ ಸಂಘದ ಪ್ರಧಾನ ಕಾರ್ಯದರ್ಶಿ ದಯಾನಂದರಾವ್, ಉಪಾಧ್ಯಕ್ಷ ಈಶ್ವರ್ ರಾವ್, ಖಜಾಂಚಿ ವಿಠಲ್ ರಾವ್ ಮಾನೆ ಮುಖಂಡರಾದ ಮನೋಹರ್ ಕಾಳೆ, ಪ್ರಕಾಶ್ ರಾವ್ ಮತ್ತಿತರರು  ಭಾಗವಹಿಸಿದ್ದರು.

ಹರಿತಲೇಖನಿ ಫೇಸ್ಬುಕ್, ಟ್ವಿಟರ್ ಲೈಕ್ ಮಾಡಿ, ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]