ದೊಡ್ಡಬಳ್ಳಾಪುರ: ನೇಕಾರರ ಸಮಸ್ಯೆಗಳ ಕುರಿತಂತೆ ಸರ್ಕಾರದ ಗಮನ ಸೆಳೆಯಲು ರೂಪಿಸಬೇಕಿರುವ ಹೋರಾಟ ಕುರಿತಂತೆ ಶುಕ್ರವಾರ ರಾಜ್ಯದ ವಿವಿಧ ನೇಕಾರರ ಮುಖಂಡರು ನಗರದ ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.
ನ.28ರಂದು ನಗರಕ್ಕೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ,ಶಾಸಕ ಕೃಷ್ಣಭೈರೇಗೌಡ ಸೇರಿ ವಿವಿಧ ನಾಯಕರು ಭೇಟಿ ನೀಡಿ ನೇಕಾರರ ಸಮಸ್ಯೆ ಆಲಿಸಲಿದ್ದಾರೆ. ಹೀಗಾಗಿ ವಿವಿಧ ನೇಕಾರರ ಮುಖಂಡರು ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ನೇಕಾರ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಯಿತು.
ರಾಜ್ಯ ನೇಕಾರರ ಸಂಘಟನೆಗಳ ರಾಜ್ಯ ಅಧ್ಯಕ್ಷ ಎಂ.ಡಿ ಲಕ್ಷ್ಮೀನಾರಾಯಣ್ ಮಾತನಾಡಿ, ಬಲಿಷ್ಠವಾಗಿರುವ ಸಮುದಾಯಗಳಿಗೆ ಸರ್ಕಾರ ಪ್ರಾಧಿಕಾರಗಳನ್ನು ರಚನೆ ಮಾಡಿದ್ದಾರೆ. ಆದರೆ 26 ಒಳ ಪಂಗಡ ಹೊಂದಿರುವ ನೇಕಾರ ಸಮುದಾಯಕ್ಕೆ ಪ್ರಾಧಿಕಾರ ರಚನೆ ಅವಶ್ಯಕತೆ ಇದೆ. ನೇಕಾರ ಸಮುದಾಯವನ್ನು ಎಸ್ಟಿ ವರ್ಗಕ್ಕೆ ಸೇರ್ಪಡೆ ಮಾಡಬೇಕಿದೆ ಎಂದರು.
ಲಾಕ್ ಡೌನ್ ಸಮಯದಲ್ಲಿ ನೇಕಾರರಿಗೆ ಸರ್ಕಾರ ಘೋಷಣೆ ಮಾಡಿದ ಎರಡು ಸಾವಿರ ರೂಪಾಯಿ ಕೂಡ ನೀಡಿಲ್ಲ. ಕರೊನಾದಿಂದ ನೇಕಾರ ನೇಯ್ದ ಸೀರೆಗಳಿಗೆ ಸೂಕ್ತವಾದ ಬೆಲೆಯು ಇಲ್ಲ, ಮಾರುಕಟ್ಟೆ ಇಲ್ಲದಂತಾಗಿದೆ. ವಿದ್ಯುತ್ ಮಗ್ಗದ ಘಟಕಗಳಿಗೆ ಈ ಹಿಂದೆ ನೀಡಲಾಗುತ್ತಿದ್ದ ಸಬ್ಸಿಡಿ ನಿಲ್ಲಿಸಲಾಗಿದೆ. ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಿದರೆ ಇಡೀ ನೇಕಾರ ಸಮುದಾಯಕ್ಕೆ ಪೆಟ್ಟಾಗಲಿದೆ ಎಂದರು.
ನೇಕಾರರು ಸರ್ಕಾರದ ಸೌಲಭ್ಯಗಳು ಪಡೆಯಲು ಯಾವುದೇ ಗುರುತಿನ ಚೀಟಿ ಇಲ್ಲ.ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಕ್ಕೆ ಸೂಕ್ತ ಪರಿವಾರ ನೀಡಿಲ್ಲ ಈ ಎಲ್ಲಾ ಸಮಸ್ಯೆಗಳನ್ನು ಮುಂದಿನ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ಮುಂದೆ ಮಂಡಿಸಿ ನಮಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ಶಾಸಕ ವೆಂಕಟರಮಣಯ್ಯ, ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್,ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ. ಮುನೇಗೌಡ, ನೇಕಾರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್,ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು, ಸಿಪಿಐಎಂ ಮುಖಂಡ ಆರ್.ಚಂದ್ರತೇಜಸ್ವಿ, ಕನ್ನಡ ಪಕ್ಷದ ಸಂಜೀವ್ ನಾಯಕ್ ಇದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ

