ಬೆಂಗಳೂರು: ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನ ತೋಟಗಾರಿಕಾ ಕಾರ್ಯಕ್ರಮವಾದ ಹನಿ ನೀರಾವರಿ ಯೋಜನೆಯನ್ನು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆಗಳು ಮತ್ತು ಬೆಳೆಗಳ ಅಂತರಕ್ಕನುಗುಣವಾಗಿ ಮಾರ್ಗಸೂಚಿಯನ್ವಯ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಾಮಾನ್ಯ ರೈತರಿಗೆ ಪ್ರಥಮ 2 ಹೆಕ್ಟೇರ್‌ಗೆ ನಿಗದಿಪಡಿಸಿರುವ ವೆಚ್ಚದ ಶೇ.90ರಷ್ಟು ಸಹಾಯಧನವನ್ನು ಹಾಗೂ ನಂತರ ಮೂರು ಹೆಕ್ಟೇರ್‌ಗೆ ಶೇ.45ರಷ್ಟು ಸಹಾಯಧನವನ್ನು ನೀಡಲಾಗುವುದು(ತರಕಾರಿ ಹಾಗೂ ವಾಣಿಜ್ಯ ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ವರೆಗೆ ಸಹಾಯಧನವನ್ನು ನೀಡಲಾಗುವುದು). ಈ ಯೋಜನೆಯಡಿ ಸೌಲಭ್ಯವನ್ನು ಪ್ರತಿ ಫಲಾನುಭವಿ ಕುಟುಂಬಕ್ಕೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.
ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತರಾಗಿದ್ದಲ್ಲಿ, ತಮ್ಮ ಜಮೀನು ವ್ಯಾಪ್ತಿಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ಕಚೇರಿಯ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿಯನ್ನು ಪಡೆಯಬಹುದು, ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ದೂ.ಸಂ.: 080-27623770, ಮೊ.ಸಂ.: 9632410677, ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ದೂ.ಸಂ.: 080-27681204, ಮೊ.ಸಂ.:9448825101, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ), ದೂ.ಸಂ.: 080-27904760, ಮೊ.ಸಂ.: 9538953949, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿಪಂ) ದೂ.ಸಂ.: 080-27726213, ಮೊ.ಸಂ.: 9901754339 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರು(ಜಿಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

