ಆರ್ ಎಸ್ ಎಸ್ ಶಾಖೆಗೆ ಹೋಗಿ ಕಲಿಯುವಂತಹದ್ದು ಏನೂ ಇಲ್ಲವೆಂದ ಸಿದ್ದರಾಮಯ್ಯರಿಂದ ಲವ್ ಜಿಹಾದ್ ಪರ ವಕಾಲತ್ತು..!

ಬೆಂಗಳೂರು: ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಬಿಜೆಪಿ ನಾಯಕರ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು‌‌ ಈ‌ ಕುತಂತ್ರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜಿಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿ.ಟಿ ರವಿ ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ. ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾರಾಜ್ಯವಾದ ಉತ್ತರ ಪ್ರದೇಶ ನಮಗೆ ಮಾದರಿ ಅಲ್ಲ. 

ಆರ್ ಎಸ್ ಎಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್ ಎಸ್ ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡ್ತೇನೆ. ಬಿಜೆಪಿ ಮತ್ತು ಆರ್ ಎಸ್ ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿ ವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು.

ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವು: ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿ ಪಕ್ಷಕ್ಕೆ ಸೇರಿದವರು. ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ  ಬಿಜೆಪಿ ಸರ್ಕಾರ 1964ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ್ ನಾಳೆ ಕಾಂಗ್ರೆಸ್ ಸೇರಲಿದ್ದಾರೆ. ಉಪಚುನಾವಣೆಯಲ್ಲಿ ಅವರೇ ನಮ್ಮ ಅಭ್ಯರ್ಥಿಯಾಗಬಹುದು. ನಾವು ಮಸ್ಕಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು- ಕಾರ್ಯಕರ್ತರ‌ ಜೊತೆ ಸಮಾಲೋಚನೆ ನಡೆಸಿ ತೀರ್ಮಾನಿಸುತ್ತೇವೆ. ಪ್ರಕಾಶ್ ಹುಕ್ಕೇರಿಯವರ ಅಸಮಾಧಾನದ ಬಗ್ಗೆ ನನಗೆ ತಿಳಿದಿಲ್ಲ, ಅವರು ನನ್ನ ಜೊತೆಯಲ್ಲಿ ಏನನ್ನೂ ಹೇಳಿಲ್ಲ. ಈ ಅಸಮಧಾನದ ಸುದ್ದಿಗಳೆಲ್ಲ ಹುಕ್ಕೇರಿಯವರ ಹೆಸರಿನಲ್ಲಿ ಬಿಜೆಪಿ ನಾಯಕರು ನಡೆಸುತ್ತಿರುವ ಸುಳ್ಳು ಪ್ರಚಾರ ಇದ್ದಿರಲೂಬಹುದು. ಅದನ್ನು ತಿಳಿದುಕೊಳ್ತೇವೆ.

ಮರಾಠ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ ಐದರಂದು ನಡೆಸಲಿರುವ ಕರ್ನಾಟಕ ಬಂದ್ ನಲ್ಲಿ ಪಾಲ್ಗೊಳ್ಳುವ ಬಗ್ಗೆ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ. ಬಿಜೆಪಿ ಉಪಚುನಾವಣೆಯಲ್ಲಿ ಮರಾಠರನ್ನು ಓಲೈಸಲು ಇಂತಹ ಕ್ಷುಲಕ ರಾಜಕೀಯ ನಡೆಸುತ್ತಿದೆ. ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗಗತನದ ಹೇಳಿಕೆ ಖಂಡನೀಯ ಎಂದಿದ್ದಾರೆ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]