ಬೆಂಗಳೂರು: ಗ್ರಾಮಾಂತರ ಜಿಲ್ಲಾ ಪಂಚಾಯತಿಗೆ ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾದ ವಿ. ಪ್ರಸಾದ್ ಅವರನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಸ್ಥಾನಕ್ಕೆ ಜಯಮ್ಮ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದ ಹಿನ್ನೆಲೆಯಲ್ಲಿ ವಿ.ಪ್ರಸಾದ್ ಎರಡನೇ ಬಾರಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಪ್ರಸಾದ್ ಅವರು, 17 ಸದಸ್ಯರ ಬೆಂಬಲದೊಂದಿಗೆ ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ಪ್ರಸಾದ್ ಶನಿವಾರ ರಾತ್ರಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆಯಲು ಅವರ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು, ನೂತನ ಅಧ್ಯಕ್ಷರನ್ನು ಸನ್ಮಾನಿಸಿ ಅಭಿನಂದನೆ ಸಲ್ಲಿಸಿದೆ ಎಂದು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೊಟೋ ಪೊಸ್ಟ್ ಮಾಡಿ ಬರೆದುಕೊಂಡಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

