ಬೆಂಗಳೂರು: ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಹೆಜ್ಜಾಜಿ ಗ್ರಾಮದಲ್ಲಿ ನೂತನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಶಂಕುಸ್ಥಾಪನೆ ನೆರವೇರಿಸಿದರು.
ಈ ವೇಳೆ ಜಿಪಂ ಅಧ್ಯಕ್ಷ ವಿ.ಪ್ರಸಾದ್, ಉಪಾಧ್ಯಕ್ಷೆ ಕನ್ಯಾಕುಮಾರಿ ಶ್ರೀನಿವಾಸ್, ತಾಪಂ ಅಧ್ಯಕ್ಷೆ ರತ್ನಮ್ಮ ಜಯರಾಂ, ಸದಸ್ಯೆ ರತ್ನಮ್ಮ, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್, ಮುಖಂಡರಾದ ತಿ.ರಂಗರಾಜು, ರಾಮಕೃಷ್ಣಯ್ಯ, ರವಿಕುಮಾರ್, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ವೈದ್ಯಾಧಿಕಾರಿ ಡಾ.ಅಮಿತ್ ಮತ್ತಿತರಿದ್ದರು.
ಆರೋಗ್ಯ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ರೂ.1 ಕೋಟಿ 80 ಲಕ್ಷ ಅನುದಾನದಲ್ಲಿ ಈ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

