ಬೆಂಗಳೂರು: ರಾಜ್ಯ ಸರ್ಕಾರ ಮತ ಬ್ಯಾಂಕ್‍ಗಾಗಿ ಪ್ರಾಧಿಕಾರ ರಚನೆ ಮಾಡುತ್ತಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ, ಮೊದಲು ಒಕ್ಕಲಿಗ ಸಮುದಾಯಕ್ಕೆ ಪ್ರಾಧಿಕಾರ ಮಾಡಬೇಕಾಗಿತ್ತು ಎಂದು ಒತ್ತಾಯಿಸಿದ್ದಾರೆ.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮಲ್ಲಸಂದ್ರ ವಾರ್ಡ್ ಕಚೇರಿ ಉದ್ಘಾಟನಾ ಸಂದರ್ಭದಲ್ಲಿ ಅವರು ಮಾತನಾಡಿದರು.
ರಾಜ್ಯಕ್ಕೆ ಒಕ್ಕಲಿಗ ಸಮುದಾಯದ ತ್ಯಾಗ, ಸೇವೆ ದೊಡ್ಡದಾಗಿದ್ದು, ಬೆಂಗಳೂರಿಗೆ ಒಕ್ಕಲಿಗರ ಕೊಡುಗೆ ದೊಡ್ಡದಿದೆ. ಹಾಗೆ ನೋಡಿದರೆ ಮೊದಲು ಒಕ್ಕಲಿಗ ಸಮುದಾಯಕ್ಕೆ ಪ್ರಾಧಿಕಾರ ಮಾಡಬೇಕಿತ್ತು. ನಿಗಮ ಪ್ರಾಧಿಕಾರ ರಚನೆ ವಿಚಾರದಲ್ಲಿ ಸರ್ಕಾರದಲ್ಲಿ ಗೊಂದಲ ಸೃಷ್ಠಿಯಾಗಿದೆ. ಮತಕ್ಕೋಸ್ಕರ ಪ್ರಾಧಿಕಾರ ರಚನೆ ಮಾಡುವುದು ಸೂಕ್ತವಲ್ಲ.
ಸರ್ಕಾರ ಘೋಷಣೆ ಮಾಡುವ ಮುನ್ನವೇ ಸ್ಪಷ್ಟವಾಗಿ ಮನವರಿಕೆ ಮಾಡಬೇಕಿತ್ತು. ಈಗ ಭಾಷೆ ಭಾಷೆಗಳ ನಡುವೆ ಸಂಘರ್ಷ ಶುರುವಾಗಿದೆ. ಕನ್ನಡ ಪರ ಸಂಘಟನೆಗಳನ್ನು ದಬ್ಬಾಳಿಕೆಯಿಂದ ಹದ್ದುಬಸ್ತಿನಲ್ಲಿಡಲು ಪ್ರಯತ್ನಿಸುತ್ತಿದೆ. ಇದರ ಬದಲು ಪ್ರಾಧಿಕಾರ ರಚನೆಯ ಉದ್ದೇಶದ ಬಗ್ಗೆ ಕನ್ನಡಪರ ಸಂಘಟನೆಗಳ ಜೊತೆ ಚರ್ಚೆ ಮಾಡಿ ಮನವರಿಕೆ ಮಾಡಿಕೊಡಬೇಕಿತ್ತು ಎಂದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

