ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭೆ ಉಪಚುನಾವಣೆಯಲ್ಲಿ ಆಯ್ಕೆಯಾದ ಮುನಿರತ್ನ ಹಾಗೂ ಡಾ.ಸಿ.ಎಂ.ರಾಜೇಶ್‍ಗೌಡ ವಿಧಾನಸಭೆಯ ನೂತನ ಸದಸ್ಯರಾಗಿ ಇಂದು ಪ್ರಮಾಣ ವಚನವನ್ನು ಸ್ವೀಕರಿಸಿದರು.
ವಿಧಾನಸೌಧದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸಮ್ಮುಖದಲ್ಲಿ ಇಬ್ಬರು ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮುನಿರತ್ನ ಅವರು ಜಯಗಳಿಸಿದ್ದು, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ರಾಜೇಶ್‍ಗೌಡ ಅವರು ಕೂಡ ಚುನಾಯಿತರಾಗಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

