ಬೆಂಗಳೂರು: ಕನ್ನಡ ಸಾಹಿತ್ಯ ಪರುಷತ್ ಅಧ್ಯಕ್ಷ ಡಾ. ಮನು ಬಳಗಾರ್ ಅಧ್ಯಕ್ಷತೆಯಲ್ಲಿ ,ಮಂಗಳವಾರ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿ ಮಾಡಲಾಗಿದೆ.
2021ರ ಫೆಬ್ರವರಿ 26.27 ಮತ್ತು 28ರಂದು ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕರೊನಾ ಸೋಂಕು ಇಳಿಮುಖವಾಗುತ್ತಿದ್ದು ಮಾರ್ಗಸೂಚಿಗಳನ್ನು ಸಡಿಲಗೊಳಿಸಿ ಅಕ್ಷರ ಜಾತ್ರೆಗೆ ಅನುವು ಮಾಡಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುತ್ತದೆ ಎಂದು ಮನು ಬಳಗಾರ್ ಹೇಳಿದ್ದಾರೆ.
ಇದಕ್ಕು ಮೊದಲು ಸಮ್ಮೇಳನ ದಿನಾಂಕ ನಿಗದಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ, ಕೃ಼ಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗೂ ಚರ್ಚೆ ನಡೆಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

