ಬೆಂಗಳೂರು: ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಇಂದು ನಡೆದ ಪತ್ರಿಕಾಗೋಷ್ಠಿಯ ಸರ್ಕಾರ ವಿರುದ್ದ ಹರಿಹಾಯ್ದಿರುವ ಅವರು, ವೃದ್ಧಾಪ್ಯ ವೇತನ, ವಿಧವಾ ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಇಂತಹ ಆರ್ಥಿಕ ಸಂಕಷ್ಟದ ನಡುವೆ ನಿಗಮ ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಿಸಿ ಸರ್ಕಾರ ಇನ್ನಷ್ಟು ದುಂದುವೆಚ್ಚಕ್ಕೆ ಎಡೆಮಾಡಿಕೊಟ್ಟಿದೆ. ಇದು ಮುಖ್ಯಮಂತ್ರಿ ಯಡಿಯೂರಪ್ಪನವರ ಅಧಿಕಾರ ಉಳಿಸಿಕೊಳ್ಳುವ ಸರ್ಕಸ್ಸಲ್ಲದೆ ಬೇರೇನಲ್ಲ.
ಕರೊನಾದಿಂದ ಜನ ಬದುಕು ಸಾಗಿಸುವುದೇ ಕಷ್ಟವೆನ್ನುವ ಪರಿಸ್ಥಿತಿ ಇರುವಾಗ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳು ಆನ್‌ಲೈನ್ ಶಿಕ್ಷಣವನ್ನು ಕೈಬಿಡಲು ಹೊರಟಿರುವುದು ಅಮಾನವೀಯ. ಇದು ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆ, ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಂಡು ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

