ರಾಷ್ಟ್ರದ ಐಕ್ಯತೆ ಸಮಗ್ರತೆ ಕಾಪಾಡುವ ಗುರುತರ ಹೊಣೆ ನಮ್ಮೆಲ್ಲರ ಮೇಲಿದೆ: ದೊಡ್ಡಬಳ್ಳಾಪುರದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಸಮಾರೋಪ

ದೊಡ್ಡಬಳ್ಳಾಪುರ: ಜಾಗತೀಕರಣ, ಖಾಸಗೀಕರಣದ ಇಂದಿನ ದಿನಗಳಲ್ಲಿ ನಾವು ದೇಶದ ಐಕ್ಯತೆ ಸಮಗ್ರತೆಗಳನ್ನು ಕಾಪಾಡಿಕೊಂಡು ದೇಶವನ್ನು ಮುನ್ನಡೆಸುವ ಗುರುತರ ಹೊಣೆಗಾರಿಕೆಯಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಪರ ಜಿಲ್ಲಾಕಾರಿ ಡಾ.ಜಗದೀಶ್.ಕೆ.ನಾಯಕ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ, ಪೌರಾಡಳಿತ ಇಲಾಖೆ, ಜಿಲ್ಲಾಡಳಿತ  ಹಾಗೂ ನಗರಸಭೆ ಸಹಯೋಗದೊಂದಿಗೆ ಗ್ರಾಮಾಂತರ ದೊಡ್ಡಬಳ್ಳಾಪುರ ನಗರಸಭೆ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಸಮಾರೋಪದ ಅಂಗವಾಗಿ ಪರಿಸರ  ಸ್ವಚ್ಛತಾ ಕಾರ್ಯಕ್ರಮ ಹಾಗೂ ಗಿಡಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸಂವಿಧಾನದಲ್ಲಿ ನಂಬಿಕೆ ಇಟ್ಟು ಗೌರವ ನೀಡುವುದರೊಂದಿಗೆ ನಮ್ಮ ಕರ್ತವ್ಯ ನಿಭಾಯಿಸಬೇಕಿದೆ. ಐಕ್ಯತೆ ಹಾಗೂ ಸಮಗ್ರತೆಯಿಂದ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕಿದೆ. ಭಾಷೆ, ನೆಲ, ಸಂಸ್ಕೃತಿ ವಿಷಯದಲ್ಲಿ ಭಾರತೀಯರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಶಕ್ತಿಯಿದ್ದು, ನಮ್ಮ ಕಲೆ ಸಂಸ್ಕೃತಿ ಪರಂಪರೆಗಳನ್ನು ವಿಶ್ವ ಮಟ್ಟದಲ್ಲಿ ಸಾರುವುದು  ಹಾಗೂ ನಮ್ಮ ಪರಿಸರವನ್ನು ಸಂರಕ್ಷಣೆ ಮಾಡಿಕೊಳ್ಳುವುದು ಅಗತ್ಯವಾಗಿದೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಕಾರ್ಯಕ್ರಮ ಈ ದ್ಯೇಯಗಳಿಗೆ ಇಂಬು ನೀಡುತ್ತಿದೆ. ನ.19ರಿಂದ 25ರವರೆಗೆ ಜಿಲ್ಲೆಯಾದ್ಯಂತ ಕಾನೂನು ಸೇವೆಗಳ ಮಾರ್ಗದರ್ಶನದಂತೆ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಿಸಲಾಗುತ್ತಿದ್ದು, ವಿವಿಧ ಇಲಾಖೆಗಳು ಇದರಲ್ಲಿ ತೊಡಗಿಸಿಕೊಂಡಿವೆ. ಪರಿಸರ ಸಂರಕ್ಷಣೆ, ಪ್ರತಿಜ್ಞಾ ವಿ ಬೋಧನೆ, ಕವಿ ಗೋಷ್ಟಿ ಮೊದಲಾದ ವಿವಿಧ ಕಾರ್ಯಕ್ರಮಗಳನ್ನು  ಸಪ್ತಾಹದಲ್ಲಿ ಹಮ್ಮಿಕೊಳ್ಳಲಾಗಿತ್ತು ಎಂದು ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ನಾಗರಕೆರೆ ಅಂಗಳದಲ್ಲಿ ಸಸಿಗಳನ್ನು ನೆಡಲಾಯಿತು ಹಾಗೂ ಗಗನಾರ್ಯ ಮಠದ ಅಯ್ಯ ಪಂತರ ಕಲ್ಯಾಣಿಯನ್ನು ಸ್ವಚ್ಛಗೊಳಿಸಲಾಯಿತು.

ಈ ಸಂದರ್ಭದಲ್ಲಿ  ಪೌರಾಡಳಿತ ಇಲಾಖೆಯ ಜಿಲ್ಲಾ ಯೋಜನಾ ನಿರ್ದೇಶಕರಾದ ಬಿ.ಎಸ್.ಸುಮಾ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಪರಿಸರ ಅಭಿಯಂತರ ಈರಣ್ಣ, ಹಿರಿಯ ಆರೋಗ್ಯ ನಿರೀಕ್ಷಕರಾದ ರೂಪಾ ಹಾಗೂ ನಗರಸಭೆ ಸಿಬ್ಬಂದಿ, ಪೌರ ಕಾರ್ಮಿಕರು ಭಾಗವಹಿಸಿದ್ದರು.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]