ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠ ಸೂತ್ತೂರು ಕ್ಷೇತ್ರದಲ್ಲಿ ದೊಡ್ಡಮ್ಮತಾಯಿ ದೇವಸ್ಥಾನ ಮೂರ್ತಿ ಪ್ರತಿಷ್ಠಾಪನೆಯ ಉದ್ಘಾಟನೆ, ಸುತ್ತೂರು ಮಠದ ಅತಿಥಿ ಗೃಹ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕು ಸ್ಥಾಪನೆಯನ್ನು ಬುಧವಾರ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಗೃಹಸಚಿವ ಬಸವರಾಜ ಬೊಮ್ಮಾಯಿ, ಸಂಸದ ವಿ.ಶ್ರೀನಿವಾಸಪ್ರಸಾದ್, ಶಾಸಕರಾದ ಅಡಗೂರು ಎಚ್.ವಿಶ್ವನಾಥ್, ಬಿ.ಹರ್ಷವರ್ಧನ, ಡಾ.ಯತೀಂದ್ರ ಸಿದ್ದರಾಮಯ್ಯ, ಎಂ.ಅಶ್ವಿನ್ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

