ದೊಡ್ಡಬಳ್ಳಾಪುರ: ಹೊಲದಲ್ಲಿ ಹಸು ಮೇಯಿಸುತ್ತಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಸರವನ್ನು ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ತಾಲ್ಲೂಕಿನ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ 12.30 ಸಮಯದಲ್ಲಿ ಬಂಡಯ್ಯನಪಾಳ್ಯ ಗ್ರಾಮ ಹೊರಭಾಗದಲ್ಲಿ ಮುತ್ತಮ್ಮ (42) ತಮ್ಮ ಹೊಲದಲ್ಲಿ ಹಸು ಮೇಯಿಸುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು, ಒಂಟಿಯಾಗಿ ಮಹಿಳೆ ಇರೋದನ್ನ ಗಮನಿಸಿ ಆಕೆಯ ಮೇಲೆ ದಾಳಿಮಾಡಿ 34 ಗ್ರಾಂ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಈ ವೇಳೆ ಮುತ್ತಮ್ಮರವರ ತಲೆಗೆ ಗಾಯವಾಗಿದ್ದು, ನೆಲಮಂಗಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಕುರಿತು ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

