ದೊಡ್ಡಬಳ್ಳಾಪುರ: ತಮಿಳುನಾಡು ರಾಜ್ಯದಲ್ಲಿ ಆರ್ಭಟಿಸುತ್ತಿರುವ ನಿವಾರ್ ಚಂಡಮಾರುತದ ಪ್ರಭಾವ ದೊಡ್ಡಬಳ್ಳಾಪುರದ ಮೇಲೆ ತೀವ್ರವಾಗಿ ಆಗತೊಡಗಿದೆ.
ತಾಲೂಕಿನಾಧ್ಯಂತ ಗುರುವಾರ ಬೆಳಗಿನಿಂದಲೇ ಮೋಡಕವಿದ ವಾತಾವರಣದಿಂದಾಗಿ ದೊಡ್ಡಬಳ್ಳಾಪುರ ತಾಲೂಕು ಮಲೆನಾಡಿನಂತಾಗಿದ್ದು, ಜಡಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಜೋರಾಗಿ ಮಳೆಯಾಗುತ್ತಿರುವುದು ಕಂಡುಬಂದಿದೆ. ವಿಡಿಯೋ ನೋಡಿ
ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಎದ್ದಿರುವ ಈ ನಿವಾರ್ ಚಂಡಮಾರುತ ಇದೀಗ ತೀವ್ರ ಸ್ವರೂಪ ತಾಳಿದ್ದು, ವಾಯುವ್ಯ ದಿಕ್ಕಿನೆಡೆಗೆ ಸಾಗುತ್ತಿದೆ. ತಮಿಳುನಾಡು, ಪುದುಚೇರಿ ಮತ್ತು ಚೆನ್ನೈ ಮಾರ್ಗವಾಗಿ ನ.26ರ ಹೊತ್ತಿಗೆ ಕಾರೈಕಲ್ ದಾಟಲಿದೆ. ಇದರಿಂದಾಗಿ ಕರ್ನಾಟಕದಲ್ಲಿ ಮಳೆ ಸುರಿಯಲಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಎರಡು ದಿನ ನಿವಾರ್ ಚಂಡಮಾರುತದ ಅಬ್ಬರ ಕಾಣಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

