ಅಂಬಾಲ: ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಚಲೋ ಚಳವಳಿ ವೇಳೆ ಪಂಜಾಬ್ ರೈತರು ಪೊಲೀಸ್ ಬ್ಯಾರಿಕೇಡ್ ಮುರಿದು ಹರ್ಯಾಣ ರಾಜ್ಯವನ್ನು ಪ್ರವೇಶಿಸಲು ಮುಂದಾದ ವೇಳೆ ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.
ಪಂಜಾಬ್ ಮತ್ತು ಹರ್ಯಾಣ ಗಡಿಯ ಅಂಬಾಲ ಎಂಬಲ್ಲಿ ರೈತರು ದೆಹಲಿ ಚಲೋ ಆರಂಭಿಸಿ ಪೊಲೀಸ್ ಬ್ಯಾರಿಕೇಡ್ ತೆಗೆದು ನುಗ್ಗಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಹರ್ಯಾಣ ಪೊಲೀಸರು ಧ್ವನಿವರ್ಧಕ ಮೂಲಕ ಪ್ರತಿಭಟನಾಕಾರರಿಗೆ ಎಚ್ಚರಿಸುತ್ತಿದ್ದರು. ಅಂತರಾಜ್ಯ ಗಡಿಭಾಗದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಪ್ರತಿಭಟನಾ ನಿರತ ರೈತರು ಬ್ಯಾರಿಕೇಡ್ ಗಳನ್ನು ಗಗ್ಗರ್ ನದಿಗೆ ಎಸೆಯಲು ಮುಂದಾಗಿದ್ದಲ್ಲದೆ. ಕೆಲವರು ಕಪ್ಪು ಬಾವುಟ ಪ್ರದರ್ಶಿಸುತ್ತಿದ್ದರು.
ಪ್ರತಿಭಟನಾಕಾರರು ದೆಹಲಿಗೆ ತೆರಳದಂತೆ ಹರ್ಯಾಣ ಪೊಲೀಸರು ಹಲವು ಹಂತಗಳಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಇದಕ್ಕೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ಮಾಡುವುದನ್ನು ಕಾನೂನಿನ ಮೂಲಕ ಹತ್ತಿಕ್ಕುವಂತಿಲ್ಲ. ನಾವು ಶಾಂತಿಯುತವಾಗಿ ಪ್ರತಿಭಟನೆ ಮಾಡುತ್ತಿದ್ದೆವು. ಆದರೆ ನಮ್ಮ ಹಕ್ಕನ್ನು ಪೊಲೀಸರು ತಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

