ಇಂದು ದೊಡ್ಡಬಳ್ಳಾಪುರಕ್ಕೆ ಸಿದ್ದರಾಮಯ್ಯ / ನೇಕಾರರ ಕುಂದು ಕೊರತೆ ಆಲಿಸಲು ವಿರೋಧ ಪಕ್ಷದ ನಾಯಕ ಭೇಟಿ

ದೊಡ್ಡಬಳ್ಳಾಪುರ: ನೇಕಾರರ ಕುಂದು ಕೊರತೆಗಳನ್ನು ಆಲಿಸಲು ದೊಡ್ಡಬಳ್ಳಾಪುರಕ್ಕೆ ಇಂದು ವಿರೋಧ ಪಕ್ಷದ ನಾಯಕ  ಸಿದ್ದರಾಮಯ್ಯ ಆಗಮಿಸುತ್ತಿದ್ದಾರೆ.

ನಗರದ ಬಸವಣ್ಣನ ದೇವಾಲಯದ ಸಮೀಪವಿರುವ ಖಾಸಗಿ ಕಲ್ಯಾಣ ಮಂಟಪದಲ್ಲಿ 11ಗಂಟೆಗೆ ನೇಕಾರರ ಚಿಂತನ ಸಭೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ತಾಪಂ ಅಧ್ಯಕ್ಷೆ ರತ್ನಮ್ಮಜಯರಾಂ ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು, ನೇಕಾರ ಸಂಘಟನೆಗಳ ಮುಖಂಡರು ಭಾಗವಹಿಸಲಿದ್ದಾರೆ. ಸಭೆಗೂ ಮುನ್ನ ಇತ್ತೀಚೆಗೆ ಆತ್ಮಹತ್ಯೆಗೆ ಒಳಗಾದ ನೇಕಾರನ ಮನೆಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರಕಾರದ ಗಮನ ಸೆಳೆಯಲು ನೇಕಾರರು ತಮ್ಮ ಬೇಡಿಕೆಗಳನ್ನು ಕ್ರೂಡಿಕರಣಗೊಳಿಸಿದ್ದಾರೆ. ರಾಜ್ಯದ ಬೆಳಗಾವಿ, ಬಾಗಲಕೋಟೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಹಾಗೂ ತುಮಕೂರು ಸೇರಿದಂತೆ 10 ರಿಂದ 15 ಜಿಲ್ಲೆಗಳ ನೇಕಾರರು ಒಂದೇ‌ ಕಸುಬನ್ನೇ ನಂಬಿ ಜೀವನ ಸಾಗಿಸುತ್ತಿದ್ದಾರೆ. ಇವರ  ಬೇಡಿಕೆಗಳನ್ನು ಆಲಿಸುವಲ್ಲಿ ಸರಕಾರ ಯಾವುದೇ ರೀತಿಯ ಉತ್ಸಾಹ ತೋರದೆ ಇರುವುದರಿಂದ ವಿಪಕ್ಷ ನಾಯಕರ ಮೂಲಕ ಚರ್ಚೆ ನಡೆಸಿ ಸರಕಾರದ ಗಮನ ಸೆಳೆಯಲು ಸಿದ್ದವಾಗಿದ್ದಾರೆ. 

ಗುಜರಾತ್, ಮಹಾರಾಷ್ಟ್ರದಲ್ಲಿ ಇರುವಂತೆ ಕಪಡ ಮಾರುಕಟ್ಟೆ ನಿರ್ಮಾಣವಾಗಬೇಕು, ಎಪಿಎಂಸಿ ಮಾದರಿಯಲ್ಲಿ ಮಳಿಗೆಗಳನ್ನು ಸರಕಾರ ನಿರ್ಮಿಸಿ, ಬಟ್ಟೆ ಉತ್ಪಾದನೆ ಮಾಡುವವರಿಗೆ ನೀಡಬೇಕು, ಹಾಗೂ ಕೇರಳ ತಮಿಳುನಾಡು ಮಾದರಿಯಲ್ಲಿ ನೇಕಾರರ ಕಲ್ಯಾಣ ಮಂಡಳಿಯನ್ನು ರೂಪಿಸಬೇಕು. ನೇಕಾರರ ಉತ್ಪನ್ನ ಮಾರುಕಟ್ಟೆಗಳ ನಿರ್ಮಾಣವಾಗಬೇಕು ಎಂಬುದು ನೇಕಾರರ ಬೇಡಿಕೆಯಾಗಿವೆ. 

ರಾಜ್ಯದಲ್ಲಿ ರೈತರ ರೀತಿಯಲ್ಲಿ ನೇಕಾರರು ಸಹ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಜ್ಯದಲ್ಲಿ 11 ಜನ ಆತ್ಮಹತ್ಯೆ  ಮಾಡಿಕೊಂಡಿದ್ದಾರೆ. ಇಂತವರ ಕುಟುಂಬಕ್ಕೆ  ಸರಕಾರ ಕನಿಷ್ಠ ಸಾಂತ್ವನ ಹೇಳಿತ್ತಿಲ್ಲ ಎಂಬುದು ನೇಕಾರರ ಅಳಲು.

ಮುಖ್ಯ ಬೇಡಿಕೆಗಳು.

1, ವಿದ್ಯುತ್ ಬಿಲ್ , ಗೃಹ ಬಳೆಕೆಯೂ ಸೇರಿ ಸಂಪೂರ್ಣ ಮನ್ನಾ ಮಾಡಬೇಕು.

2, ನೂತನವಾಗಿ ಬಂಡವಾಳ ಹೂಡಲು ಬ್ಯಾಂಕುಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಅಗತ್ಯವಿರುವ ಹಣಕಾಸು ಸೌಲಭ್ಯ ನೀಡಬೇಕು.

3, ಆತ್ಮಹತ್ಯೆ ಮಾಡಿಕೊಂಡ ಕುಟುಂಬಗಳಿಗೆ 10ಲಕ್ಷ ರೂ ಪರಿಹಾರ ನೀಡಬೇಕು. ವಿಧವಾ ಮಹಿಳೆಯರಿಗೆ ಮಾಸಿಕ 5 ಸಾವಿರ ವಿಶೇಷ ನೆರವು ನೀಡಬೇಕು.

4. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ನೇಕಾರರು ಮಾಡಿರುವ ಸಾಲವನ್ನು ಮನ್ನಾ ಮಾಡಬೇಕು.

ಹಾಗೂ ಇನ್ನೂ ಅನೇಕ ಬೇಡಿಕೆಗಳನ್ನು ಸಿದ್ದರಾಮಯ್ಯ ಮುಂದೆ ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಇಡಲಿದೆ.

ಕಾಂಗ್ರೆಸ್ ಸಮಾವೇಶಕ್ಕೆ ನೇಕಾರರ ಹೆಸರು – ಬಿಜೆಪಿ: ಇಂದು ನಡೆಯುತ್ತಿರುವ ನೇಕಾರರ ಚಿಂತನಾ ಸಭೆಯಲ್ಲಿ ಬಿಜೆಪಿ ಮುಖಂಡರು ಗೈರಾಗಬಹುದೆನ್ನಲಾಗುತ್ತಿದೆ. ಈ ಗಾಗಲೇ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಯ ವಿವಿಧ ಘಟಕಗಳ ಮುಖಂಡರು ಕಾಂಗ್ರೆಸ್ ಸಮಾವೇಶಕ್ಕೆ ನೇಕಾರರ ಬಳಸಿಕೊಳ್ಳುತ್ತಿದ್ದಾರೆ, ನೇಕಾರರ ಬಗ್ಗೆ ಕಾಳಜಿ ಇದ್ದಲ್ಲಿ ಪಕ್ಷಾತೀತ ಸಭೆ ನಡೆಸಬೇಕಿತ್ತು ಎಂದು ಆಕ್ರೋಶ ವ್ಯಕ್ತಪಡಿಸುತಿದ್ದಾರೆ. ಕೆಲವರು ನೇಕಾರರ  ವಿಚಾರದಲ್ಲಿ ರಾಜಕೀಯ ಸಲ್ಲದು ಎಂದರೆ. ರಾಜಕೀಯ ಶುರುಮಾಡಿ ರಾಜಕೀಯ ಬೇಡ ಎಂದರೆ ಹೇಗೆ ಎಂದು ಪರ ವಿರೋಧ ಚರ್ಚೆ ನಡೆಯುತ್ತಿದೆ.

ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]