ಬೆಂಗಳೂರು: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ 2020-21ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಕಲಾವಿದರು ಹಾಗೂ ಸಂಘ-ಸಂಸ್ಥೆಗಳಿಂದ ಧನಸಹಾಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳಲ್ಲಿ ನಿರಂತರ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಸಂಘ-ಸಂಸ್ಥೆಗಳಿಗೆ, ಅಸಂಘಟಿತ ತಂಡಗಳು/ ಏಕವ್ಯಕ್ತಿ ಕಲಾವಿದರಿಗೆ ವಾದ್ಯಪರಿಕರ/ ವೇಷಭೂಷಣ ಖರೀದಿಗೆ, ಚಿತ್ರಕಲೆ ಮತ್ತು ಶಿಲ್ಪಕಲೆಗಳ ಏಕವ್ಯಕ್ತಿ/ ತಂಡದ ಕಲಾವಿದರಿಗೆ ಕಲಾಕೃತಿಗಳ ಪ್ರದರ್ಶನ ಏರ್ಪಡಿಸಲು ಧನಸಹಾಯ ನೀಡಲಾಗುವುದು.
ಈ ಮೂರು ಯೋಜನೆಗಳಿಗಾಗಿ ಧನಸಹಾಯ ಪಡೆಯಲು ಸೇವಾಸಿಂಧು ಪೋರ್ಟಲ್ sevasindhu.karnataka.gov.in ಮುಖಾಂತರ ಅರ್ಜಿ ಸಲ್ಲಿಸಲು 2020ರ ಡಿಸೆಂಬರ್ 27 ಕೊನೆಯ ದಿನವಾಗಿದೆ.
ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110, ಸೇವಾ ಸಿಂಧು ಪೊರ್ಟಲ್ ಹಾಗೂ ಇಲಾಖೆಯ ವೆಬ್‍ಸೈಟ್: www.kannadasiri.karnataka.gov.in ಹಾಗೂ ದೂ.ಸಂ.: 080-29560059 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಮಂಜುನಾಥ್. ಬಿ.ಆರಾಧ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

