ಬೆಂಗಳೂರು: ಬಡತನ ರೇಖೆ ಗಿಂತ ಕೆಳಗಿರುವ ಸಾಕಷ್ಟು ಮಂದಿ ಇರುವುದರಿಂದ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ಸ್ಥಾಪಿಸಿ 1 ಸಾವಿರ ಕೋಟಿ ರೂ. ಅನುದಾನ ನೀಡುವಂತೆ ಸ್ಪಟಿಕಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಅವರು, ಒಕ್ಕಲಿಗರ ಸಮುದಾಯ ಸರ್ಕಾರದ ಅಭಿವೃದ್ಧಿ ಯೋಜನೆ, ಕಾಮಗಾರಿಗೆ ಭೂಮಿ ಬಿಟ್ಟುಕೊಟ್ಟು ಸಾಕಷ್ಟು ಮಂದಿ ಬೀದಿಗೆ ಬಿದ್ದಿದ್ದಾರೆ. ಹೀಗಾಗಿ ಸಮುದಾಯದ ಅಭಿವೃದ್ಧಿಗೆ ನಿಗಮ ಸ್ಥಾಪನೆಯಾಗಬೇಕೆಂದರು.
ಇದೇ ವೇಳೆ ಒಕ್ಕಲಿಗ ಸಮುದಾಯದಲ್ಲಿರುವ 110 ಉಪಜಾತಿಗಳನ್ನು ಕೇಂದ್ರದ ಓಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ಒತ್ತಾಯಿಸಿದರು.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ ನಮ್ಮ Facebook Twitter ಅನುಸರಿಸಿ.

