ಬೆಂಗಳೂರು: ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯಿತಿ ಚುನಾವಣೆಗಳಿಗೆ ದಿನಾಂಕ ಪ್ರಕಟಿದೆ.
ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, 113 ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಮೊದಲ ಹಂತದ ಚುನಾವಣೆ ಡಿ. 22ರಂದು ನಡೆಯಲಿದೆ. ಡಿ. 27ರಂದು ಉಳಿದ ತಾಲ್ಲೂಕುಗಳಲ್ಲಿನ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಡಿ.7ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.
ಒಟ್ಟು 5,762 ಗ್ರಾಮ ಪಂಚಾಯಿತಿಗಳ 45128 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕೆಲವು ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯುತ್ತಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.
ಇಂದಿನಿಂದಲೇ (ನ. 30) ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ, ಡಿ. 11 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಡಿ. 14 ನಾಮಪತ್ರ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದೆ. ಡಿ. 30ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲಿ ಸ್ಥಳೀಯ ಮಟ್ಟದಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳು ಇಂದಿನಿಂದಲೇ ಚುರುಕುಗೊಂದಿದೆ.
ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhani Facebook Twitter ಅನುಸರಿಸಿ.

