ಕರ್ನಾಟಕ ಬಂದ್ ಗೆ ದೊಡ್ಡಬಳ್ಳಾಪುರದಲ್ಲಿ‌ 30ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ / ಬಂದ್ ಯಾವುದೇ ಭಾಷೆ ಅಥವಾ ಧರ್ಮದವರ ವಿರುದ್ಧವಲ್ಲ: ಒಕ್ಕೂಟದ ಸ್ಪಷ್ಟನೆ

ದೊಡ್ಡಬಳ್ಳಾಪುರ: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಡಿಸೆಂಬರ್ 5 ರಂದು ಕನ್ನಡ ಪರ ಸಂಘಟನೆಗಳ ಕರೆ ಕೊಟ್ಟಿರುವ ಕರ್ನಾಟಕ ಬಂದ್ ಗೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.

ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ನಗರದ ಡಾ.ರಾಜ್‌ಕುಮಾರ್ ಕಲಾ ಮಂದಿರದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘಟನೆಗಳು, ವರ್ತಕರ ಸಂಘ ಕೃಷ್ಣರಾಜೇಂದ್ರ ಮಾರುಕಟ್ಟೆ ವರ್ತಕರ ಸಂಘ, ಆಟೋ ಚಾಲಕರ ಸಂಘ ಸೇರಿದಂತೆ 30ಕ್ಕೂ ಹೆಚ್ಚು ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿ ತಮ್ಮ ಬೆಂಬಲ ಘೋಷಿಸಿದ್ದಾರೆ.

ಸಭೆಯಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರಕ್ಕೆ ರಾಜ್ಯದಿಂದ 25 ಸಂಸದರನ್ನು ಕೊಟ್ಟಿದ್ದು, ಜನಪರವಾಗಿ ಕೆಲಸ ಮಾಡಬೇಕಿದ್ದ ಸರ್ಕಾರ ಕಾರ್ಮಿಕ ಕಾಯ್ದೆಗಳು, ಎಪಿಎಂಸಿ, ಭೂ ಸುಧಾರಣ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮತ್ತು ವಿದ್ಯುತ್ ಖಾಸಗೀಕರಣ ಸೇರಿದಂತೆ ಸುಗ್ರೀವಾಜ್ಙೆಗಳ ಮೂಲಕ ಹಲವಾರು ಜನ ವಿರೋಧಿ ಕಾಯ್ದೆಗಳನ್ನು ಜಾರಿ ಮಾಡುತ್ತಿದೆ ಎಂದು ಆರೋಪಿಸಿದರು.

ಕನ್ನಡಿಗರನ್ನು ಭಾಷೆ ಮತ್ತು ಧರ್ಮದ ಹೆಸರಿನಲ್ಲಿ ವಿಭಜನೆ ಮಾಡಲು ಬಿಡುವುದಿಲ್ಲ ಎಂದ ಮುಖಂಡರು, ಈ ಬಂದ್ ಯಾವುದೇ ಭಾಷೆ ಅಥವಾ ಧರ್ಮದವರ ವಿರುದ್ಧವಲ್ಲ. ಬದಲಿಗೆ ಬಿಜೆಪಿ ನೇತೃತ್ವದ ಸರ್ಕಾರಗಳು ಕರುನಾಡು ಮತ್ತು ಕನ್ನಡಿಗರಿಗೆ ಮಾಡುತ್ತಿರುವ ದ್ರೋಹಕ್ಕೆ ವಿರೋಧ ವ್ಯಕ್ತಪಡಿಸುವುದಾಗಿದೆ ಎಂದು ಸಮರ್ಥಿನೆ ಮಾಡಿಕೊಂಡರು. 

ಬಂದ್ ಮಾಡುವಂತೆ ಒತ್ತಡವಿಲ್ಲ: ನಾವು ಯಾರನ್ನೂ ಬಲವಂತವಾಗಿ ಬಂದ್ ಮಾಡುವಂತೆ ಒತ್ತಡ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದ ಮುಖಂಡರು ಕಳೆದ ಆರು ತಿಂಗಳ ಕರೊನಾ ಸಾಂಕ್ರಾಮಿಕ ಸಂಕಷ್ಟದಲ್ಲಿ ತಮ್ಮ ವ್ಯಾಪಾರ ವಹಿವಾಟು ಸ್ಥಗಿತಗೊಂಡಿದ್ದು ಸಂಕಷ್ಟವನ್ನು ಅನುಭವಿಸಿದ್ದೇವೆ, ರಾಜ್ಯದ ಅಸ್ಮಿತೆಯ ಉಳಿವಿಗಾಗಿ ಒಂದು ದಿನದ ಬಂದ್‌ಗೆ ಸಹಕರಿಸುವಂತೆ ವರ್ತಕರು ಮತ್ತು ಜನರಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದರು.

ಕನ್ನಡಪರ ಸಂಘಟನೆಗಳ ಒಕ್ಕೂಟದ ಸಂಜೀವ್ ನಾಯಕ್, ಸು.ನರಸಿಂಹಮೂರ್ತಿ, ತ.ನ.ಪ್ರಭುದೇವ, ರಮೇಶ್, ಪ್ರಮಿಳಾ ಮಹದೇವ್, ಆದಿತ್ಯನಾಗೇಶ್, ಆರ್. ಕೆಂಪರಾಜ್, ಶಿವಕುಮಾರ್, ಆರಾಧ್ಯ, ಮುನೇಗೌಡ, ಅಂಜನಮೂರ್ತಿ, ಗುರುರಾಜ್, ಸತ್ಯನಾರಾಯಣ್, ಮುಸ್ತಪಾ, ಜಿ.ಲಕ್ಷ್ಮೀಪತಿ, ಮಲ್ಲೇಶ್, ಪು.ಮಹೇಶ್, ಜಯರಾಮು, ಸತೀಶ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.

ಕ್ಷಣ ಕ್ಷಣದ ತಾಜಾ ಸುದ್ದಿ, ಮಾಹಿತಿಗಾಗಿ Harithalekhaniಯನ್ನು Facebook / Twitterಗಳಲ್ಲಿ ಅನುಸರಿಸಿ.

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]